ಶ್ರೀ ಸವಿತಾ ಮಹರ್ಷಿ ಜಯಂತಿ: ಅದ್ದೂರಿ ಮೆರವಣಿಗೆ

ರಾಯಚೂರು.ಫೆ.12- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶ್ರೀ ಸವಿತಾ ಮಹರ್ಷಿ ಜಯಂತಿಯನ್ನು ನಗರದಲ್ಲಿಂದು ಅದ್ಧೂರಿಯಾಗಿ ಆಚರಿಸಲಾಯಿತು.
ನಗರದ ಮಡ್ಡಿಪೇಟೆ ಬಡಾವಣೆಯಲ್ಲಿರುವ ಶ್ರೀ ಶಂಕುಚಕ್ರ ಮಾರುತಿ ದೇವಸ್ಥಾನದಲ್ಲಿ ಮಹರ್ಷಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯು ಸರ್ಧಾರ್ ವಲ್ಲಭಬಾಯಿ ಪಟೇಲ್ ವೃತ್ತ, ಮೌಳೇಶ್ವರ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಕಾರ್ಯಕ್ರಮ ಜರುಗುವ ಸ್ಥಳ ರಂಗಮಂದಿರಕ್ಕೆ ತಲುಪಿತು. ಮೆರವಣಿಗೆಯಲ್ಲಿ ವಿವಿಧ ಕಲಾ-ತಂಡಗಳು ಭಾಗವಹಿಸಿದ್ದವು.
ಈ ಸಂದರ್ಭದಲ್ಲಿ ನಗರಾಧ್ಯಕ್ಷ ಯು.ದೊಡ್ಡಮಲ್ಲೇಶಪ್ಪ, ಅಶೋಕ ಗಸ್ತಿ, ನರಸಿಂಹಲು ವಡವಾಟಿ, ಸವಿತಾ ಸಮಾಜ ಜಿಲ್ಲಾಧ್ಯಕ್ಷ ವಿಜಯಭಾಸ್ಕರ ಇಟಗಿ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕಿ ನಿರ್ದೇಶಕಿ ಬಿ.ನೀಲಮ್ಮ, ಭೀಮೇಶ, ನಾಗರಾಜ, ನರಸಿಂಹ ಮೂರ್ತಿ, ರಾಘವೇಂದ್ರ ಇಟಗಿ, ಗೋವಿಂದ, ಅನೀಲ್, ಗೋಪಾಲ ವಡವಾಟಿ ಸೇರಿದಂತೆ ಸವಿತಾ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Leave a Comment