ಶ್ಲಾಘನೆಗೆ ಪಾತ್ರವಾದ ಶಾಸಕರ ಮಾನವೀಯತೆ!

ಮಂಗಳೂರು, ಸೆ.೨೩- ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ರಸ್ತೆಯಲ್ಲಿ ಮಹಿಳೆಯೋರ್ವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಅದನ್ನು ಕಂಡ ಶಾಸಕರು ಕೂಡಲೇ ತಮ್ಮ ಕಾರಿನಿಂದ ಇಳಿದು ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿರುವ ಘಟನೆ ನಿನ್ನೆ ನಡೆದಿದೆ. ಇವರ ಈ ಸಮಾಜಪರ ಕಾಳಜಿಗೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Leave a Comment