ಸಂವಿಧಾನಕ್ಕೆ 70 ವರ್ಷ ವರ್ಷವಿಡೀ ಸಂಭ್ರಮಾಚರಣೆ

ನವದೆಹಲಿ, ನ. ೭- ಭಾರತೀಯ ಸಂವಿಧಾನ ಅಳವಡಿಸಿಕೊಂಡು 70 ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ವರ್ಷಪೂರ್ತಿ ಸಂಭ್ರಮಾಚರಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಈ ತಿಂಗಳ 26 ರಂದು ಉಭಯ ಸದನಗಳ ಜಂಟಿ ಅಧಿವೇಶನ ಆಯೋಜಿಸಲಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ, ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ್ದಾರೆ ಎಂದು ಲೋಕಸಭೆಯ ಸಚಿವಾಲಯದ ಮೂಲಗಳು ತಿಳಿಸಿವೆ.
ರಾಜ್ಯಸಭೆಯ ಸಭಾಪತಿಯಾಗಿರುವ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಲೋಕಸಭಾ ಸದಸ್ಯ ಓಂ ಬಿಱ್ಲಾ ಅವರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿಗಳು, ಮಾಜಿ ಪ್ರಧಾನಮಂತ್ರಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಸೆಂಟ್ರಲ್ ಹಾಲ್‌ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ನೂತನ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಕೈಗೊಳ್ಳಲಾದ ನಿರ್ಧಾರಗಳನ್ನು ಅನಾವರಣ ಮಾಡಲಾಗುತ್ತದೆ. ಸಮಗ್ರ ಪ್ರಾಂತೀಯ ಆರ್ಥಿಕ ಪಾಲುದಾರಿಕೆ (ಆರ್‌ಸಿಇಪಿ) ಪಾಲುದಾರಿಕೆಯ ಒಪ್ಪಂದಕ್ಕೆ ಸಹಿ ಹಾಕಲು ನಿರಾಕರಿಸಿದ ತೀರ್ಮಾನವನ್ನು ಪ್ರಚುರ ಪಡಿಸಲಾಗುವುದೆಂದು ಕೇಂದ್ರವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ನ. 25 1949ರಲ್ಲಿ ದೇಶದಲ್ಲಿ ಸಂವಿಧಾನವನ್ನು ಅಳವಡಿಸಿಕೊಳ್ಳಲಾಗಿತ್ತು. ಜ. 26, 1950ರಿಂದ ದೇಶದ ಆಡಳಿತ ದಾಖಲೆಗಳು ಪರಿಣಾಮಕಾರಿಯಾಗಿ ಅಸ್ತಿತ್ವಕ್ಕೆ ಬಂದವು.

Leave a Comment