ಸಂಸದ ಪ್ರಜ್ವಲ್​ ರೇವಣ್ಣಗೆ ಕಂಟಕ; ಸುಳ್ಳು ಪ್ರಮಾಣ ಪತ್ರ ವಿಚಾರಣೆ ಆರಂಭ

ಹಾಸನ (ಜನವರಿ 14); ಹಾಸನ ಸಂಸದ ಪ್ರಜ್ಚಲ್ ರೇವಣ್ಣ ವಿರುದ್ಧ ಚುನಾವಣೆಯಲ್ಲಿ ಸುಳ್ಳು ಪ್ರಮಾಣ ಪತ್ರ ನೀಡಿರುವ ಕುರಿತು ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಂಡಿದ್ದು, ಮಾಜಿ ಪ್ರಧಾನಿ ಮೊಮ್ಮಗನಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಪ್ರಜ್ವಲ್ ರೇವಣ್ಣ ಸಂಸದರಾಗಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದರು. ಆದರೆ, ಪ್ರಜ್ವಲ್ ರೇವಣ್ಣ ಚುನಾವಣೆಯಲ್ಲಿ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಹಾಸನದ ಬಿಜೆಪಿ ಅಭ್ಯರ್ಥಿ ಎ. ಮಂಜು ಆರೋಪಿಸಿದ್ದರು. ಅಲ್ಲದೆ, ವಕೀಲ ದೇವರಾಜೇಗೌಡ ಮೂಲಕ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ಪ್ರಜ್ವಲ್ ರೇವಣ್ಣ ಅವರ ಗೆಲುವನ್ನು ಅನೂರ್ಜಿತಗೊಳಿಸುವಂತೆ ಮನವಿ ಮಾಡಿದ್ದರು.
ಈ ಕುರಿತ ವಿಚಾರಣೆಯನ್ನು ಹೈಕೋರ್ಟ್ ನಿನ್ನೆಯಿಂದ ಆರಂಭಿಸಿದೆ. ಅಕಸ್ಮಾತ್ ಪ್ರಜ್ವಲ್ ರೇವಣ್ಣ ಸುಳ್ಳು ಪ್ರಮಾಣ ಪತ್ರ ನೀಡಿರುವುದು ಸಾಬೀತಾದರೆ ಅವರ ಸಂಸದ ಸ್ಥಾನಕ್ಕೆ ಕುತ್ತು ಬರಲಿದೆ ಎನ್ನಲಾಗುತ್ತಿದೆ.

Leave a Comment