ಸಚಿವ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ

ನವದೆಹಲಿ, ಜು14- ಮಾಜಿ ಕ್ರಿಕೆಟಿಗ ಮತ್ತು ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬರೆದಿದ್ದ ಪತ್ರವನ್ನು ಟ್ವೀಟ್ ನಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ಪತ್ರವನ್ನು ಅವರು ಕಳೆದ ಜೂನ್ 10 ರಂದು ರಾಹುಲ್ ಗಾಂಧಿ ಬರೆದಿದ್ದರು.

ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಇತ್ತೀಚಿಗೆ ನಡೆಸಿದ ಸಂಪುಟ ಪುನರರಚನೆ ಕುರಿತು ಸಿಧು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹಾಗೂ ಸಿಧು ನಡುವೆ ನಡುವಿನ ವೈಮನಸ್ಸಿಗೆ ಕಾರಣವಾಗಿದೆ.

ಮುಖ್ಯಮಂತ್ರಿ ಅಮರಿಂದರ್ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಸಿಧು ಭಾಗವಹಿಸಲಿಲ್ಲ. ಲೋಕಸಭಾ ಚುನಾವಣೆಯ ಫಲಿತಾಂಶಗಳನ್ನು ಪರಾಮರ್ಶಿಸುವ ಸಭೆಯಲ್ಲಿ ಸಿಧು ಅವರ ಸಾಧನೆಯನ್ನು ಅಮರಿಂದರ್ ತೀವ್ರವಾಗಿ ಟೀಕಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಿಗೆ ಸಿಧು ಪಾತ್ರವೂ ಕಾರಣ ಎಂದು ಅವರು ಆರೋಪಿಸಿದ್ದರು.

ಈ ಹಿನ್ನೆಲೆಯಲ್ಲಿ ಸಿಧು ಸಚಿವ ಖಾತೆಗಳ ಪೈಕಿ ಸ್ಥಳೀಯ ಸಂಸ್ಥೆಗಳ ಇಲಾಖೆಯನ್ನು ಹಿಂಪಡೆದುಕೊಂಡಿದ್ದರು. ಇದರಿಂದ ಸಿಧು ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಮಾತ್ರ ಸಚಿವರಾಗಿದ್ದರು. ಈ ಬೆಳವಣಿಗೆಗಳ ಹಿನ್ನಲೆಯಲ್ಲಿ ತೀವ್ರ ಆಕ್ರೋಶಗೊಂಡಿದ್ದ ಸಿಧು ಕಳೆದ ತಿಂಗಳು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ವಿಶೇಷ ಸಭೆ ನಡೆಸಿದ್ದರು. ತಮಗೆ ಪ್ರಾಮುಖ್ಯತೆ ಇಲ್ಲದ ಖಾತೆಯನ್ನು ವಹಿಸಲಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

Leave a Comment