ಸನ್ಮಾನ

ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಇಂದು ನಗರಕ್ಕೆ ಆಗಮಿಸಿದ ಪ್ರಸಾದ ಅಬ್ಬಯ್ಯ ಅವರಿಗೆ ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ರಫೀಕ ದರಗಾದ ಹಾಗೂ ನವನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಕಿತ್ತೂರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಸದಸ್ಯ ವಿನೋದ ಜಾಧವ, 24ನೇ ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ಖಾದರ ದರಗಾದ, ಡಿಸಿಸಿ ಅಧ್ಯಕ್ಷ ಅಲ್ತಾಫ ಹಳ್ಳೂರ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಾಜಿ ಅಧ್ಯಕ್ಷ ಸದಾನಂದ ಡಂಗನವರ, ಮಾಜಿ ಮೇಯರ್ ಪ್ರಕಾಶ ಕ್ಯಾರಕಟ್ಟಿ, ಮಹಾನಗರ ಪಾಲಿಕೆ ಸದಸ್ಯರಾದ ದಶರಥ ವಾಲಿ, ಗಣೇಶ ಟಗರಗುಂಟಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು

Leave a Comment