ಸಮರ್ಥನೆಗಾಗಿ ಸಂಪರ್ಕ ಅಭಿಯಾನಕ್ಕೆ ಸಿದ್ದಗಂಗಾಶ್ರೀ ಚಾಲನೆ

ತುಮಕೂರು, ಆ. ೯- ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ನಾಲ್ಕು ವರ್ಷಗಳನ್ನು ಪೂರೈಸಿದ್ದು, ಇದರ ಪ್ರಯುಕ್ತ ಕಳೆದ 4 ವರ್ಷಗಳಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳು ಹಾಗೂ ಅನುಷ್ಠಾನಗೊಂಡಿರುವ ಯೋಜನೆಗಳ ಕಿರು ಹೊತ್ತಿಗೆಯನ್ನು ರಾಜಕೀಯೇತರ ಗಣ್ಯರಿಗೆ ನೀಡಿ ಮೋದಿಜೀ ರವರ ಸಾಧನೆಗಳನ್ನು ಸಮಾಜದ ಗಣ್ಯರಿಗೆ, ಸಾಹಿತಿಗಳಿಗೆ, ವ್ಯಾಪಾರಸ್ಥರಿಗೆ, ಬುದ್ದಿಜೀವಿಗಳಿಗೆ ನೀಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಸಹ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಬೇಕೆಂಬ ಆಶಯದೊಂದಿಗೆ “ಸಮರ್ಥನೆಗಾಗಿ ಸಂಪರ್ಕ ಅಭಿಯಾನಕ್ಕೆ” ಚಾಲನೆ ನೀಡಲಾಯಿತು.

ನಗರದ ಸಿದ್ದಗಂಗಾ ಮಠದಲ್ಲಿ ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳಿಗೆ ಕಿರುಹೊತ್ತಿಗೆ ನೀಡುವುದರ ಮೂಲಕ ಈ ಕಾರ್ಯಕ್ರಮಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ. ಹುಲಿನಾಯ್ಕರ್, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಶಿವಪ್ರಸಾದ್, ನಿವೃತ್ತ ಜಿಲ್ಲಾಧಿಕಾರಿ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಸಿ. ಸೋಮಶೇಖರ್, ಜಿಲ್ಲಾ ಉಪಾಧ್ಯಕ್ಷ ಟಿ.ಆರ್. ಸದಾಶಿವಯ್ಯ, ಜಿಲ್ಲಾ ಕಾರ್ಮಿಕ ಪ್ರಕೋಷ್ಟ ಸಂಚಾಲಕ ಕೊಪ್ಪಲ್ ನಾಗರಾಜ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಟಿ.ಹೆಚ್. ಹನುಮಂತರಾಜು, ಮುಖಂಡರಾದ ತರಕಾರಿ ಮಹೇಶ್, ಜಗದೀಶ್, ಲಿಂಗಪ್ಪ, ರಕ್ಷಿತ್, ಚಿದಾನಂದ್, ಗುರುಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Leave a Comment