ಸಮಸ್ಯೆ ಪರಿಹಾರಕ್ಕೆ ಮುಂದಾದ ಲಾಲು-ನಿತೀಶ್

ಪಾಟ್ನಾ.ಜು.೧೭-ಬಿಹಾರದ ಆಢಳಿತಾರೂಡ ಮಹಾಮೈತ್ರಿಯಲ್ಲಿ ಉಂಟಾಗಿರುವ ಬಿರುಕನ್ನು ಮಾತುಕತೆಯ ಮೂಲಕ ಸರಿಪಡಿಸಿಕೊಳ್ಳಲು ಆರ್.ಜೆ.ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಂದಾಗಿದ್ದಾರೆ.
ಲಾಲು ಪ್ರಸಾದ್ ಯಾದವ್, ಪತ್ನಿ ರಾಬ್ದಿದೇವಿ, ಪುತ್ರ ಹಾಗು ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ನಿವಾಸ ಮತ್ತು ಕಚೇರಿಯ ಮೇಲೆ ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಜೆಡಿಯು ಬಿಗಿ ಪಟ್ಟು ಉಂಟಾಗಿರುವ ಹಿನ್ನೆಲೆಯಲ್ಲಿ ಬಿಕ್ಕಟ್ಟು ಉಂಟಾಗಿದೆ.
ಇದರಿಂದಾಗಿ ಬಿಹಾರದ ಮಹಾಮೈತ್ರಿ ಖತಂ ಆಗಲಿದೆ ಎಂದೇ ಎಲ್ಲರೂ ಭಾವಿಸಿರುವ ಬೆನ್ನಲ್ಲೇ ಇಬ್ಬರು ನಾಯಕರು ಒಂದೆಡೆ ಕುಳಿತು ಸಮಸ್ಯೆ ಬಗೆಹರಿಸಿಕೊಳ್ಳಲು ಮುಂದಾಗಿರುವುದು ರಾಜಕೀಯ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಮಾಹಾ ಮೈತ್ರಿಯಲ್ಲಿ ಯಾವುದೇ ಬಿರುಕಿಲ್ಲ ಎಲ್ಲವೂ ಸರಿಯಾಗಿದೆ ಎಂದು ಜೆಡಿಯು ವಕ್ತಾರ ನೀರಜ್ ಕುಮಾರ್ ಹೇಳಿದ್ದಾರೆ.
ಪಕ್ಷದ ಅಧ್ಯಕ್ಷರಾಗಿರುವ ನಿತೀಶ್ ಕುಮಾರ್ ಸಮಸ್ಯೆಯನ್ನು ಬಗೆಹರಿಸಲಿದ್ದಾರೆ ಎನ್ನುವ ವಿಶ್ವಾಸವಿದೆ.ಮಹಾ ಮೈತ್ರಿಗೆ ಯಾವುದೇ ವಿಘ್ನ ಎದುರಾಗದು ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತೇಜಸ್ವಿ ಯಾದನ್ ಉಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬೇಕೆ ಅಥವಾ ಇಲ್ಲವ ಎನ್ನುವುದನ್ನು ಇಬ್ಬರು ನಾಯಕರು ಮಾತುಕತೆಯ ಸಂದರ್ಭದಲ್ಲಿ ಚರ್ಚಿಸಿ ತೀರ್ಮಾನಕ್ಕೆ ಬರಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಆರ್‌ಜೆಡಿ ಹಿರಿಯ ಮುಖಂಡ ಶಿವಾನಂದ್ ತಿವಾರಿ, ಮಹಾ ಮೈತ್ರಿಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಬಗೆ ಹರಿಸಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.
ಸದ್ಯದಲ್ಲಿಯೇ ಲಾಲು ಪ್ರಸಾದ್ ಯಾದವ್ ಮತ್ತು ನಿತೀಶ್ ಕುಮಾರ್ ಒಟ್ಟಿಗೆ ಕುಳಿತು ಸಮಸ್ಯೆಯನ್ನು ಬಗೆಹರಿಸಲಿದ್ದಾರೆ ಎನ್ನುವ ವಿಶ್ವಾಸದಲ್ಲಿ ಎರಡೂ ಪಕ್ಷಗಳಿವೆ.
ಆರ್‌ಜೆಡಿ ಮತ್ತು ಜೆಡಿಯು ಎರಡೂ ಪಕ್ಷಗಳು ಬಿಜೆಪಿ ವಿರುದ್ದ ಹರಿಹಾಯಲು ಮುಂದಾಗಿದ್ದಾರೆ. ಸಮಸ್ಯೆಗೆ ಮೂಲಕ ಕಾರಣ ಬಿಜೆಪಿ ಎಂದು ಆರೋಪಿಸಿವೆ.

Leave a Comment