ಸಮಾಜ ಎಚ್ಚರಿಸುವಲ್ಲಿ ಪತ್ರಕರ್ತರ ಕಾರ್ಯ ಪ್ರಮುಖ

ಚಳ್ಳಕೆರೆ.ಆ.6; ಸಮಾಜವನ್ನು ಸರಿ ದಾರಿಯಲ್ಲಿ ಮುನ್ನಡೆಸುವ ಹಾಗೂ ಸಮಾಜವನ್ನು ಎಚ್ಚರಿಸುವಲ್ಲಿ ಪತ್ರಕರ್ತರು ಕಾರ್ಯ ಪ್ರಮುಖವಾಗಿದ್ದು ಇವರೂ ಸಹ ಸಮಾಜ ಸೇವಕರು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ತಾಲೂಕಿನ ನಾಯಕನಹಟ್ಟಿ ಪಟ್ಟಣದ ವಿದ್ಯಾವಿಕಾಸ್ ಶಾಲೆಯಲ್ಲಿ ನಡೆದ ಕರ್ನಾಟಕ ಪ್ರೆಸ್‍ಕ್ಲಬ್ ಚಳ್ಳಕೆರೆ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕೋದ್ಯಮ ಒಂದು ಸಾಮಾಜಿಕ ಜವಾಬ್ದಾರಿಯಾಗಿದ್ದು, ಪತ್ರಕರ್ತರು ತುಂಬಾ ಹೊಣೆಗಾರಿಕೆಯಿಂದ ನಡೆದುಕೊಳ್ಳಬೇಕು. ಯಾವುದೇ ಆಸೆ ಆಮೀಷಗಳಿಗೆ ಬಲಿಯಾಗದೆ, ಜನರ ಸಮಸ್ಯೆಗಳಿಗೆ ಪರಿಹಾರವನ್ನು ಕೊಡಿಸಬೇಕು. ಈ ನಿಟ್ಟಿನಲ್ಲಿ ಹಲವು ಸಮಸ್ಯೆ ಸವಾಲುಗಳು ಎದುರಾಗುತ್ತವೆ. ಇದಾವುದಕ್ಕೂ ಅಂಜದೆ ಮುನ್ನುಗ್ಗಬೇಕು. ಇಂದು ಸಮಾಜದಲ್ಲಿ ಹಲವು ಸಾಮಾಜಿಕ ಸಮಸ್ಯೆಗಳಿವೆ. ಆ ಎಲ್ಲಾ ಸಮಸ್ಯೆಗಳಿಗೆ ಪತ್ರಕರ್ತರು ಸ್ಪಂದಿಸುತ್ತಾ, ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಮೂಲಕ ಸಮಾಜವನ್ನು ಸರಿ ದಾರಿಯಲ್ಲಿ ನಡೆಯಲು ಸಾಕ್ಷಿಯಾಗುತ್ತಾರೆ. ಸಾರ್ವಜನಿಕ ಸಮಸ್ಯೆಗಳನ್ನು ಪತ್ರಿಕೆಯಲ್ಲಿ ಪ್ರಚುರ ಪಡಿಸುವ ಮೂಲಕ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳನ್ನು ಎಚ್ಚರಗೊಳಿಸುತ್ತಾರೆ. ಹಾಗೂ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತಾರೆ.

ಇಂದು ರಾಜ್ಯದಲ್ಲಿ ಸಾವಿರಾರು ಪತ್ರಕರ್ತರು ಪತ್ರಿಕೋದ್ಯಮ ಕಾಯಕದಲ್ಲೇ ಜೀವನ ನಡೆಸುತ್ತಿದ್ದು, ಹಲವರು ಜೀವನಕ್ಕೆ ಭದ್ರತೆ ಇಲ್ಲದೆ ಬದುಕನ್ನು ಸಾಗಿಸುತ್ತಿದ್ದಾರೆ. ಇವರ ಬದುಕಿಗೆ ಸೂಕ್ತವಾದ ಭದ್ರತೆಯನ್ನು ಒದಗಿಸಲು ಸರ್ಕಾರದ ಮಟ್ಟದಲ್ಲಿ ಗಮನ ಸೆಳೆಯಲಾಗುವುದು. ಹಾಗೂ ಚಳ್ಳಕೆರೆ ತಾಲ್ಲೂಕು ಪತ್ರಕರ್ತರಿಗೆ ತಾಲ್ಲೂಕು ಆಡಳಿತದಿಂದ ನಿವೇಶನಗಳನ್ನು ನೀಡುವ ವಿಷಯವು ತುಂಬಾ ತಡವಾಗಿದ್ದು, ಈ ಬಗ್ಗೆ ಹಲವು ಬಾರಿ ಚರ್ಚಿಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಸೂಕ್ತ ಕೈಗೊಳ್ಳಲಾಗುವುದು ಎಂದರು.

ನಂತರ ಕರ್ನಾಟಕ ಪ್ರಸ್‍ಕ್ಲಬ್ ರಾಜ್ಯಾಧ್ಯಕ್ಷ ದಯಾನಂದ್ ಮಾತನಾಡಿ. ಪತ್ರಕರ್ತರ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆ ಮುಖ್ಯ. ಇಂದು ಪತ್ರಕರ್ತರ ಜೀವನ ನಿರ್ವಹಣೆ ತುಂಬಾ ಕಷ್ಟವಾಗಿದ್ದು, ಸರ್ಕಾರದ ಸೌಲಭ್ಯಗಳ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಪತ್ರಕರ್ತರೆಲ್ಲರೂ ಸಂಘಟಿತರಾಗಿ ಕನಿಷ್ಟ ಮಟ್ಟದ ಸೌಲಭ್ಯಗಳನ್ನು ಪಡೆಯಲು ಹೋರಾಟ ಮಾಡುವ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕರ್ನಾಟಕ ಪ್ರೆಸ್‍ಕ್ಲಬ್ ಶಾಖೆಯು ಕಾರ್ಯನಿರ್ವಹಿಸುತ್ತಿದ್ದು, ಸುಮಾರು 2ಸಾವಿರ ಪತ್ರಕರ್ತರು ಸಂಘಟಿತರಾಗಿದ್ದಾರೆ ಎಂದು ಕರ್ನಾಟಕ ಪ್ರಸ್‍ಕ್ಲಬ್‍ನ ದೇಯೋದ್ದೇಶಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಟ್ಟಣಪಮಚಾಯಿತಿ ಸ್ಥಾಯಿಸಮಿತಿ ಅಧ್ಯಕ್ಷ ಎನ್.ಮಹಾಂತಣ್ಣ, ಬಿಜೆಪಿ ಮಂಡಲ ಅಧ್ಯಕ್ಷ ಎಂ.ವೈ.ಟಿ.ಸ್ವಾಮಿ, ಬಳ್ಳಾರಿ ಜಿಲ್ಲೆ ಪತ್ರಕರ್ತರ ಸಂಘದ ಅಧ್ಯಕ್ಷ ಖಾಜಾಹುಸೇನ್, ಪಟ್ಟಣಪಂಚಾಯಿತಿ ಸದಸ್ಯರಾದ ಜೆ.ಟಿ.ಎಸ್.ತಿಪ್ಪೇಸ್ವಾಮಿ, ಜೆ.ಆರ್.ರವಿಕುಮಾರ್, ಮನ್ಸೂರ್, ಎಸ್.ಉಮಾಪತಿ, ಟಿ.ಬಸಣ್ಣ, ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಅಧ್ಯಕ್ಷ ಪಂಚಾಕ್ಷರಿಸ್ವಾಮಿ, ಮುಖಂಡರಾದ ಪಿ.ಶಿವಣ್ಣ, ಪಿ.ಬಿ,ತಿಪ್ಪೇಸ್ವಾಮಿ, ಸಿ.ಬಿ.ಮೋಹನ್ ಹಾಗೂ ಚಳ್ಳಕೆರೆ ತಾಲ್ಲೂಕು ಪತ್ರಕರ್ತರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಬಿ.ವಿ.ಮಂಜುನಾಥ, ಕಾರ್ಯನಿರತ ಪತ್ರರ್ಕರ ಸಂಘದ ಅಧ್ಯಕ್ಷ ಸಿ.ಪಿ.ರಂಗನಾಥ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

Leave a Comment