ಸಮ್ಮಿಶ್ರ ಸರ್ಕಾರಕ್ಕೆ ವೀರಶೈವ, ಲಿಂಗಾಯತರಿಂದ ಪಾಠ

ರಾಯಚೂರು.ಏ.16- ರಾಜ್ಯ ಸಮ್ಮಿಶ್ರ ಸರ್ಕಾರದ ದುರಾಡಳಿತದಿಂದ ಅಭಿವೃದ್ಧಿ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿವೆ. ಜಿಲ್ಲೆಯಲ್ಲಿ ಕೊನೆ ಭಾಗದ ರೈತರಿಗೆ ನೀರು ದೊರೆಯದ ದುಸ್ಥಿತಿ ನಿರ್ಮಾಣವಾಗಿದೆಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಲೋಕಸಭಾ ಚುನಾವಣೆ ವಂಶ ಪರಂಪರೆ ರಾಜಕೀಯಕ್ಕೆ ಇತಿಶ್ರೀ ಹಾಡಲಿದೆಂದು ಹೇಳಿದರು.
ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಯಡಿಯೂರಪ್ಪ ಅವರು ಸಿರವಾರ ಪಟ್ಟಣದಲ್ಲಿ ಸಾರ್ವಜನಿಕರ ಸಭೆಯನ್ನುದ್ದೇಶಿಸಿ ಮಾತನಾಡಿದರು. ತುಂಗಭದ್ರಾ ಎಡದಂಡೆ ಕಾಲುವೆ ಆಧುನೀಕರಣಕ್ಕೆ ಸಾಕಷ್ಟು ಹಣ ಬಿಜೆಪಿ ಸರ್ಕಾರದಲ್ಲಿ ವೆಚ್ಚ ಮಾಡಲಾಗಿದೆ. ಆದರೂ ಕೊನೆ ಭಾಗಕ್ಕೆ ನೀರು ತಲುಪಿಸಲು ಸಮ್ಮಿಶ್ರ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ.
ಅಮರೇಶ್ವರ ನಾಯಕ ಅವರನ್ನು ಗೆಲ್ಲಿಸಿ, ಕೊನೆ ಭಾಗಕ್ಕೆ ನೀರು ತರುವ ಜವಾಬ್ದಾರಿ ನಮ್ಮದು ಎಂದು ಹೇಳಿದರು. ಈ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ದೇವೇಗೌಡರು, ಗುಲ್ಬರ್ಗಾದಿಂದ ಮಲ್ಲಿಕಾರ್ಜುನ ಖರ್ಗೆ ಸೋಲುವುದು ಖಚಿತವೆಂದು ಭವಿಷ್ಯ ನುಡಿದ ಯಡಿಯೂರಪ್ಪ, ಕಾಂಗ್ರೆಸ್ಸಿನ ಜನಾರ್ಧನ ಪೂಜಾರಿ ಅವರೇ ಮುಂದಿನ ಹತ್ತು ವರ್ಷಕ್ಕೆ ನರೇಂದ್ರ ಮೋದಿ ಪ್ರಧಾನಿ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಸಣ್ಣ ರೈತರಿಗೆ ಪ್ರತಿ ವರ್ಷ 6 ಸಾವಿರ ರೂ. ಆರ್ಥಿಕ ನೆರವು ನೀಡುವ ಯೋಜನೆ ಜಾರಿಗೊಳಿಸಿದೆ. 60 ವರ್ಷ ಮೀರಿದ ಶೇ.33 ರಷ್ಟು ಮಹಿಳೆಯರಿಗೆ ಮೀಸಲಾತಿ ನೀಡ‌ಲಾಗುವುದು ನದಿ ಜೋಡಣೆ ಸಮಸ್ಯೆ ನಿವಾರಿಸಲಾಗುವುದು ಎನ್ನುವ ಭರವಸೆ ಜನರಿಗೆ ನೀಡಲಾಯಿತು. ವೀರಶೈವ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿ ಡಿ.ಕೆ.ಶಿವಕುಮಾರ ಮತ್ತು ಎಂ.ಬಿ. ಪಾಟೀಲ್ ಅವರ ಮಧ್ಯೆ ನಡೆದ ಸಂಘರ್ಷ ಅವರ ಪಾಪದ ಕರ್ಮವಾಗಿದೆ.
ಈ ಲೋಕಸಭಾ ಚುನಾವಣೆಯಲ್ಲಿ ಇವರಿಗೆ ವೀರಶೈವ ಲಿಂಗಾಯತ ಸಮುದಾಯ ತಕ್ಕಪಾಠ ಕಲಿಸಲಿದ್ದಾರೆಂದು ಹೇಳಿದರು. ವೇದಿಕೆ ಮೇಲೆ ಶಾಸಕರಾದ ಕೆ.ಶಿವನಗೌಡ ನಾಯಕ, ಡಾ.ಶಿವರಾಜ ಪಾಟೀಲ್, ರಾಜುಗೌಡ, ರಘುನಾಥ ಮಲ್ಕಾಪುರೆ, ಎ.ಪಾಪಾರೆಡ್ಡಿ, ಅನ್ವರಿ, ಆದಿಮನಿ ವೀರಲಕ್ಷ್ಮೀ, ಲೋಕಜನಶಕ್ತಿ ಪಕ್ಷದ ಜಿಲ್ಲಾಧ್ಯಕ್ಷ ವೆಂಕಟರೆಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Comment