ಸರಳಾದೇವಿ ಕಾಲೇಜಿನ ಉದ್ಯೋಗ ಮೇಳದಲ್ಲಿ 507 ಅಭ್ಯರ್ಥಿಗಳ ಆಯ್ಕೆ

ಬಳ್ಳಾರಿ, ಜ.13: ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳದಲ್ಲಿ 2450 ಕ್ಕೂ ಹೆಚ್ಚು ಅಭ್ಯರ್ಥಿಗಳು ಉದ್ಯೋಗಕ್ಕಾಗಿ ಹೆಸರುಗಳನ್ನು ನೊಂದಾಯಿಸಿಕೊಂಡಿದ್ದು, ಅವರಲ್ಲಿ 835 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸಂದರ್ಶನದ ಮೂಲಕ ಪರಿಶೀಲನೆ ಮಾಡಿ ಬಳಿಕ 507 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ವರಿಗೆ ಸಾಂಕೇತಿಕವಾಗಿ ನೇಮಕಾತಿ ಪತ್ರಗಳನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಯು.ಅಬ್ದುಲ್ ಮುತಾಲಿಬ್ ವಿತರಿಸಿದ್ದಾರೆ.

ಉದ್ಯೋಗ ಮತ್ತು ತರಬೇತಿ ಇಲಾಖೆ, ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕಾಲೇಜಿನ ಕರಿಯರ್ ಆಂಡ್ ಕೌನ್ಸಿಲಿಂಗ್ ಸೆಲ್‍ನ ಸಂಯುಕ್ರಾಶ್ರಯದಲ್ಲಿ ಏರ್ಪಡಿಸಿದ್ದ ಉದ್ಯೋಗಮೇಳವನ್ನು ಉದ್ಘಾಟಿಸಿದ ಅವರು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆ ಜೊತೆಗೆ ಕೌಶಲ್ಯಗಳನ್ನು ವೃದ್ಧಿಸಿಕೊಂಡು ಉದ್ಯೋಗವನ್ನು ಪಡೆಯಲು ಯೋಗ್ಯತೆಯನ್ನು ಸೃಷ್ಟಿಸಿಕೊಳ್ಳಬೇಕೆಂದು ಎಂದರು.

ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ಮಾತನಾಡಿ, ಮುಂದಿನ ದಿನಗಳಲ್ಲಿ ಸರಳಾದೇವಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸ್ಟಡೀ ಸರ್ಕಲ್‍ನ್ನು ಏರ್ಪಡಿಸಲಾಗುವುದು. ಈ ತರಬೇತಿಯು ಉಚಿತವಾಗಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಏರ್ಪಡಿಸಲು ಸಹಕರಿಸುವುದಾಗಿ ತಿಳಿಸಿದರು.

ಉದ್ಯೋಗ ಮೇಳದಲ್ಲಿ 30ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದವು.ಕರಿಯರ್ ಆಂಡ್ ಕೌನ್ಸಿಲಿಂಗ್ ಸೆಲ್‍ನ ಸಂಚಾಲಕ ಹನುಮೇಶ್ ವೈದ್ಯ, ಸದಸ್ಯರಾದ ಡಾ.ಕುಂಚಂ ನರಸಿಂಹಲು ಹಾಜರಿದ್ದರು.

Leave a Comment