ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ತಿಮ್ಮಪ್ಪ ನಿಧನ

ಬಳ್ಳಾರಿ, ಜ.11:ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಬಳ್ಳಾರಿ ಆರೋಗ್ಯ ಇಲಾಖೆಯ ಕಿರಿಯ ಆರೋಗ್ಯ ಸಹಾಯಕರಾದ ಹೆಚ್.ತಿಮ್ಮಪ್ಪನವರು ನಿನ್ನೆ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಡಾ|| ಎಂ.ಟಿ.ಮಲ್ಲೇಶ್, ಪ್ರಧಾನ ಕಾರ್ಯದರ್ಶಿ ಜಿ.ಕೆ.ರಾಮಕೃಷ್ಣ ತಿಳಿಸಿದ್ದಾರೆ.

ಮೃತರ ಅಂತ್ಯಕ್ರಿಯೆಯು ಇಂದು ಗುತ್ತಿಗೆನೂರು ಗ್ರಾಮದಲ್ಲಿ ಜರುಗಲಿದೆ. ಮೃತರು ತಂದೆ, ತಾಯಿ, ಪತ್ನಿ, ಮಕ್ಕಳು, ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ತಿಮ್ಮಪ್ಪನವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಮೃತರ ಬಂಧುಗಳಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಡಾ||ಎಂ.ಟಿ.ಮಲ್ಲೇಶ್, ಪ್ರಧಾನ ಕಾರ್ಯದರ್ಶಿ ಜಿ.ಕೆ.ರಾಮಕೃಷ್ಣ, ರಾಜ್ಯ ಸಹ ಕಾರ್ಯದರ್ಶಿ ಹನುಮಂತಪ್ಪ, ಉಪಾಧ್ಯಕ್ಷರಾದ ಆನಂದ ನಾಯ್ಕ್, ಪಂಪನಗೌಡ, ಖಜಾಂಚಿ ಶಿವಾಜಿರಾವ್ ಮತ್ತು ಡಾ|| ಕೆ.ಹನುಮಂತಪ್ಪ, ಸಿ.ನಿಂಗಪ್ಪ, ವೀರೇಶ್, ಮುಂತಾದವರು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

Leave a Comment