ಸರ್ಕಾರಿ ಶಾಲೆಯಲ್ಲಿ ರವಿ ಡಿ. ಚನ್ನಣ್ಣವರ್ ವಾಸ್ತವ್ಯ

ಈ ಹಿಂದೆ ಅಧಿಕಾರರೂಢ ರಾಜಕಾರಣಿಗಳು ಗ್ರಾಮ ವಾಸ್ತವ್ಯ ಮಾಡಿದ್ದರು. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣವರ್ ಗ್ರಾಮ ಸಭೆ ಮತ್ತು ಗ್ರಾಮ ವಾಸ್ತವ್ಯ ಮಾಡಿದ್ದಾರೆ.

ನೆಲಮಂಗಲ ತಾಲೂಕಿನ ಅರೇಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಹೂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆಯ ಮೊದಲ ಪ್ರಯತ್ನ ಇದಾಗಿದೆ. ಸಮುದಾಯದತ್ತ ಪೊಲೀಸ್ ವ್ಯವಸ್ಥೆಯನ್ನು ರೂಪಿಸುವ ದೃಷ್ಟಿಯಿಂದ ಈ ರೀತಿ ವಾಸ್ತವ್ಯ ಹೂಡಿದ್ದಾರೆ.

ಇನ್ನು ರವಿ ಡಿ. ಚನ್ನಣ್ಣವರ್ ಜೊತೆ ಡಿವೈಎಸ್‌ಪಿ, ಇನ್ಸ್‌ ಪೆಕ್ಟರ್ ಸೇರಿದಂತೆ ಒಟ್ಟು 10 ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಿದ್ದು, ಈ ಕಾರ್ಯ ಜನರ ಮೆಚ್ಚುಗೆಗೆ ಕಾರಣವಾಗಿದೆ. ನಿನ್ನೆ ಸಂಜೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಪ್ರಮುಖರೊಂದಿಗೆ ಸಭೆ ಮಾಡಿದ ಅವರು, ಹಲವಾರು ಮುಖ್ಯ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಇವರು ನಡೆಸಿದ ಸಭೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 200 ಕ್ಕೂ ಅಧಿಕ ಮಂದಿ ಭಾಗಿಯಾಗಿದ್ದರು ಎನ್ನಲಾಗಿದೆ.

Leave a Comment