ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ನಾಯಕರಿಂದ ವಾಮಮಾರ್ಗ: ರೇಣುಕಾಚಾರ್ಯ

ಬೆಂಗಳೂರು, ಜು 14 – ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದೆ. ಮುಖ್ಯಮಂತ್ರಿ ಎಚ್‍.ಡಿ.ಕುಮಾರಸ್ವಾಮಿಗೆ ನೈತಿಕತೆ ಇದ್ದರೆ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಒತ್ತಾಯಿಸಿದ್ದಾರೆ
ನಗರದ ಹೊರವಲಯದ ರೆಸಾರ್ಟ್‍ನಲ್ಲಿ ತಂಗಿರುವ ಶಾಸಕ ರೇಣುಕಾಚಾರ್ಯ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜೆಡಿಎಸ್‍ ಶಾಸಕ, ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಮಾಟ ಮಂತ್ರ ಮಾಡಿಸಿ ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನ ಪಡುತ್ತಿದ್ದಾರೆ. ಆದರೆ ಇದರಲ್ಲಿ ಅವರು ಯಶಸ್ವಿಯಾಗುವುದಿಲ್ಲ. ಸರ್ಕಾರ ಪತನವಾಗುವುದು ಸೂರ್ಯಚಂದ್ರನಷ್ಟೇ ಸತ್ಯ ಎಂದು ಹೇಳಿದರು.
ಮೈತ್ರಿ ನಾಯಕರು ಸರ್ಕಾರ ಉಳಿಸಿಕೊಳ್ಳಲು ಎಲ್ಲಾ ರೀತಿಯ ವಾಮಮಾರ್ಗಗಳನ್ನು ಅನುಸರಿಸುತ್ತಿದ್ದಾರೆ. ಆದರೆ ಈ ಸರ್ಕಾರ ಉಳಿಯುವುದು ಸಾಧ್ಯವೇ ಇಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ

Leave a Comment