ಸರ್ಕಾರ ಬಿದ್ದಾಗ ಮುಂದಿನ ಹೆಜ್ಜೆ; ಕಾರ್ಯಕರ್ತರಿಗೆ ಬಿಎಸ್‍ವೈ ಕಿವಿಮಾತು

ಶಿವಮೊಗ್ಗ.ಅ.12; ರಾಜ್ಯದಲ್ಲಿನ ಮೈತ್ರಿ ಸರ್ಕಾರ ಬೀಳಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಅರ್ಥವಿಲ್ಲ, ಸರ್ಕಾರ ಬಿದ್ದಾಗ ಆಗಿನ ರಾಜಕೀಯ ಬೆಳವಣಿಗೆ ಕುರಿತು ಅವಲೋಕಿಸಿ ಮುಂದಿನ ಹೆಜ್ಜೆ ಇಡೋಣವೆಂದು ವಿಧಾನ ಸಭೆ ವಿಪಕ್ಷ ನಾಯಕ ಬಿ.ಎಸ್.ಯಡ್ಡಿಯೂರಪ್ಪ ಕಿವಿ ಮಾತು ಹೇಳಿದ್ದಾರೆ.
ಅವರು ತಮ್ಮ ಸ್ವಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ನಿನ್ನೆ ಪ್ರಾಥಮಿಕ ಮತ್ತು ಪ್ರೌಢಶಾಲ ಸಚಿವ ಎನ್.ಮಹೇಶ್ ರಾಜೀನಾಮೆಯ ಕುರಿತು ಕೇಂದ್ರ ಸಚಿವ ಡಿ.ವಿ.ಸದಾನಂದ ಅವರು ಮೈತ್ರಿ ಸರ್ಕಾರದ ಮೊದಲ ವಿಕೆಟ್ ಪಥನಗೊಂಡಿದ್ದು ಇನ್ನೂ ಒಂದು ತಿಂಗಳಲ್ಲಿ ಬಿಜೆಪಿ ಸರ್ಕಾರ ರಚನೆಗೊಳ್ಳಲಿದೆ ಎಂಬ ಹೇಳಿಕೆ ನೀಡಿದ್ದಾರೆ. ಸದ್ಯದಲ್ಲಿಯೇ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆಯಾ ಎಂಬ ಪ್ರಶ್ನೆಗೆ ಬಿಎಸ್ ವೈ ಮೇಲಿನಂತೆ ಉತ್ತರಿಸಿದರು. ಬಿಎಸ್ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರ ಸೂಚನೆ ಮೇರೆಗೆ ಎನ್.ಮಹೇಶ್ ರಾಜೀನಾಮೆ ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರ ಮತ್ತು ಜಮಖಂಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆಯ ಕುರಿತು ಕಾರ್ಯಕರ್ತರಲ್ಲಿ ಗೊಂದಲಗಳು ಕೇಳಿಬರುತ್ತಿವೆ ಎಂಬ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಬಿಎಸ್ ವೈ ಮಂಡ್ಯದಲ್ಲಿ ಮತ್ತು ಜಮಖಂಡಿಯ ಅಭ್ಯರ್ಥಿಗಳ ಬಗ್ಗೆ ಯಾವುದೇ ಗೊಂದಲಗಳಿಲ್ಲ. ಮಾದ್ಯಮಗಳೇ ಗೊಂದಲ ಸೃಷ್ಟಿಸಿ ಹೇಳುತ್ತಿರುವುದಾಗಿದೆ. ಮಂಡ್ಯದಲ್ಲಿ ಐಎಎಸ್ ನಿವೃತ್ತ ಅಧಿಕಾರಿ ಡಾ.ಸಿದ್ದರಾಮಯ್ಯ ಅವರ ಆಯ್ಕೆಯನ್ನ ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಇನ್ನು ರಾಮನಗರ ವಿಧಾನ ಸಭಾ ಕ್ಷೇತ್ರಕ್ಕೆ ಇಂದು ಸಂಜೆ ಒಳಗೆ ಅಭ್ಯರ್ಥಿ ಅಂತಿಮಗೊಳ್ಳಲಿದ್ದಾರೆ. ಇದರ ಜವಬ್ದಾರಿಯನ್ನ ಆರ್.ಅಶೋಕ್ ಹೆಗಲಿಗೆ ಹಾಕಲಾಗಿದೆ ಎಂದರು.ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಒಂದು ಸುತ್ತು ಪ್ರವಾಸ ಮಾಡಿದ್ದೇನೆ. ನಾವು ಎಲ್ಲೂ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ಆಯ್ಕೆಯನ್ನ ಕಾದು ನೋಡಿಲ್ಲ. ಕಳೆದ ಭಾರಿ ನನ್ನ ಆಯ್ಕೆ ಹೇಗೆ ಭರ್ಜರಿಯಾಗಿ ನಡೆದಿತ್ತೊ ಹಾಗೆ ಪುತ್ರ ಬಿ.ವೈ.ರಾಘವೇಂದ್ರ ಅವರನ್ನ ಈ ಕ್ಷೇತ್ರದ ಜನ ಗೆಲ್ಲಿಸಿಕೊಡಲಿದ್ದಾರೆ ಎಂದ ವಿಶ್ವಾಸ ವ್ಯಕ್ತಪಡಿಸಿದರು

Leave a Comment