ಸರ್ಕಾರ ಸುಭದ್ರ : ಖರ್ಗೆ

 

(ನಮ್ಮ ಪ್ರತಿನಿಧಿಯಿಂದ)

ಕಲಬುರಗಿ,ಸೆ.11-ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಸುಭದ್ರವಾಗಿದೆ. ಈ ಸರ್ಕಾರವನ್ನು ಯೂರೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ನಗರದ ಕಪನೂರದ ಕಪನೂರ ಕೊಳಗೇರಿ ಪ್ರದೇಶದಲ್ಲಿ 150 ಮನೆಗಳ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಮತ್ತು ಸಚಿವ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ತೊರೆಯುತ್ತಿರುವ ವಿಷಯ ನನಗೆ ಗೊತ್ತಿಲ್ಲ. ಯಾವ ಕಾರಣಕ್ಕಾಗಿ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬುವುದು ತಿಳಿದಿಲ್ಲ. ಅವರ ಜೊತೆ ಮಾತುಕತೆಯಾಡುತ್ತೇನೆ ಎಂದು ಹೇಳಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, ಬಿಜೆಪಿ ಕಾಂಗ್ರೆಸ್ ನಾಯಕರನ್ನು ಸೆಳೆದು ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾದರೆ, ನಾವು ಸರ್ಕಾರವನ್ನು ಸ್ಥಿರಗೊಳಿಸಲು ಎಲ್ಲ ಪ್ರಯತ್ನ ಮಾಡುತ್ತೇವೆ. ಬಿಜೆಪಿಯ 10 ಜನ ಶಾಸಕರು ಕಾಂಗ್ರೆಸ್ ಸೇರಲು ತಯಾರಾಗಿದ್ದಾರೆ ಎಂದರು.

Leave a Comment