ಸರ್ಕಾರ ಸುಭದ್ರ ಡಿಸಿಎಂ ವಿಶ್ವಾಸ

ಬೆಂಗಳೂರು, ಸೆ. ೧೨- ಸಮ್ಮಿಶ್ರ ಸರ್ಕಾರ ಪತನವಾಗುವಂತಹ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ಸರ್ಕಾರ ಸುಭದ್ರವಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಪುನರುಚ್ಚರಿಸಿದರು.

ನಗರ ಪೊಲೀಸ್ ಆಯುಕ್ತರ ಕಛೇರಿಯಲ್ಲಿಂದು ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಗೆ ಮುನ್ನ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಚಿಕ್ಕಬಳ್ಳಾಪುರದ ಶಾಸಕ ಸುಧಾಕರ್ ಸೇರಿದಂತೆ ಯಾವುದೇ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗುವುದಿಲ್ಲ. ಸರ್ಕಾರ ಭದ್ರವಾಗಿದೆ ಎಂದರು.

ಸಮ್ಮಿಶ್ರ ಸರ್ಕಾರ ಪತನವಾಗುವ ಬೆಳವಣಿಗೆಗಳು ನಡೆಯುತ್ತಿಲ್ಲ. ಇಂದು ಹೇಳಿದ ಅವರು ಬೆಳಗಾವಿ ವಿಚಾರಕ್ಕೆ ಸಂಬಂಧಿಸಿದಂತೆ ಜಾರಕಿಹೊಳಿ ಸಹೋದರರಿಗೆ ಬೇಸರವಾಗಿದೆ ನಿಜ. ಎಲ್ಲವೂ ಸರಿ ಹೋಗಲಿದೆ ಎಂದು ಅವರು ಹೇಳಿದರು.

ಸಚಿವ ಡಿ.ಕೆ. ಶಿವಕುಮಾರ್ ಮೊದಲಿನಿಂದಲೂ ಬೆಳಗಾವಿ ರಾಜಕಾರಣದಲ್ಲಿ ತೊಡಗಿಕೊಂಡಿದ್ದಾರೆ. ಬೆಳಗಾವಿ ವಿಚಾರಗಳು ಹೆಚ್ಚು ಗೊತ್ತಿದೆ. ಹಾಗಾಗಿ ಆ ಬಗ್ಗೆ ಹೇಳಿಕೆ ನೀಡಿದ್ದಾರೆ ಅಷ್ಟೇ. ಅದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ ಎಂದರು.

Leave a Comment