ಸಾಮಾಜಿಕ ಅಂತರದ್ದೇ ಸಮಸ್ಯೆ !

 

ಕಲಬುರಗಿ,ಏ.7-ಕೊರೊನಾ ಸೋಂಕು ಹರಡದಂತೆ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಎಷ್ಟೇ ತಿಳುವಳಿಕೆ ಹೇಳಿದರು ಜನ ಮಾತ್ರ ಇದಕ್ಕೆ ಕಿವಿಗೊಡದೆ ಗುಂಪು ಗುಂಪುಗಿ ಸೇರುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.

ನಗರದ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ)ಯಲ್ಲಿಂದು ಬೆಳಿಗ್ಗೆ ಜನ ಯಾವುದೇ ರೀತಿಯ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮುಗಿಬಿದ್ದು ತರಕಾರಿ ಖರೀದಿಸುತ್ತಿರುವುದು ಮತ್ತು ಬ್ಯಾಂಕುಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸರತಿ ಸಾಲಿನಲ್ಲಿ ನಿಲ್ಲುತ್ತಿರುವುದು ಕೊರೊನಾ ಸೋಂಕು ಹರಡುವ ಆತಂಕ ಹೆಚ್ಚಿಸಿದೆ.

ಕೊರೊನಾ ಸೋಂಕು ಹರಡದಂತೆ ತಡೆಯಲು  ಲಾಕ್ ಡೌನ್ ಜಾರಿ ಮಾಡಿದರೂ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಮೂಲಕ ಸೋಂಕು ಹರಡದಂತೆ ತಡೆಯಿರಿ ಎಂದು ತಿಳುವಳಿಕೆ ನೀಡುತ್ತಿದ್ದರೂ  ಜನ ಮಾತ್ರ ಇದಕ್ಕೆ ಕಿವಿಗೊಡುತ್ತಿಲ್ಲ. ಇದರಿಂದಾಗಿ ಕೊರೊನಾ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅಗತ್ಯವಿದೆ.

Leave a Comment