ಸಾಲಬಾಧೆ: ರೈತ ಆತ್ಮಹತ್ಯೆ

ಮಧುಗಿರಿ, ಆ. ೧೩- ಸಾಲಬಾಧೆ ತಾಳಲಾರದೆ ಮನನೊಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಕತ್ತಿರಾಜನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ರಂಗನಾಥಪ್ಪ (58) ಎಂಬುವರೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ ರೈತ. ಈತ ನಾಲ್ಕು ಎಕರೆ ಜಮೀನಿನಲ್ಲಿ ಹತ್ತಿಯನ್ನು ಬೆಳೆದಿದ್ದರು. ಕೊಳವೆ ಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿತ್ತು. ಬೆಳೆ ಉಳಿಸಿಕೊಳ್ಳಲು ಆಗುತ್ತಿಲ್ಲ. ಸಾಲ ತೀರಿಸಲು ಸಾಧ್ಯವಾಗುವುದಿಲ್ಲ ಎಂದು ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈ ಸಂಬಂಧ ಮಿಡಿಗೇಶಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Comment