ಸಾಲಬಾಧೆ: ರೈತ ದಂಪತಿ ಆತ್ಮಹತ್ಯೆ

ಗದಗ, ನ 21- ಸಾಲಬಾಧೆ ತಾಳದೆ ವೃದ್ಧ ರೈತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರೋಣ ತಾಲೂಕಿನ ಮದಗುಣಕಿ ಗ್ರಾಮದಲ್ಲಿ ನಡೆದಿದೆ.
ಕೆರೆಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚಿಗೆ ಜಿಲ್ಲೆಯಲ್ಲಿ ಉಂಟಾಗಿದ್ದ ನೆರೆ ಹಾವಳಿ ಹಾಗೂ ಅತಿವೃಷ್ಟಿಯಿಂದಾಗಿ ದಂಪತಿ ಬೆಳೆದಿದ್ದ ಬೆಳೆಗಳೆಲ್ಲಾ ನೀರು ಪಾಲಾಗಿದ್ದವು. ಬೆಳೆಗಾಗಿ ಮಾಡಿದ ಸಾಲವೂ ತೀರದೇ, ಇತ್ತ ಬೆಳೆದಿದ್ದ ಬೆಳೆಗಳು ಹಾಳಾಗಿದ್ದನ್ನು ಕಂಡ ರೈತ ದಂಪತಿ ಕೆರೆಗೆ ಹಾರಿ ಪ್ರಾಣ ಬಿಟ್ಟಿದ್ದಾರೆಂದು ಹೇಳಲಾಗುತ್ತಿದೆ.
ಸದ್ಯ ನರಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment