ಸಾಲ ಬಾಧೆ: ರೈತ ಆತ್ಮಹತ್ಯೆ

ಬೀದರ್,ಜ.13- ಸಾಲ ಬಾಧೆಯಿಂದ ನೊಂದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹಿಪ್ಪಳಗಾಂವ ಗ್ರಾಮದಲ್ಲಿ ನಡೆದಿದೆ.
ಐದು ಎಕರೆ ಜಮೀನು ಹೊಂದಿದ್ದ ರೈತ ಪರಶುರಾಮ ಮಾಣಿಕ (45) ಹಿಪ್ಪಳಗಾಂವ್, ಡಿಸಿಸಿ ಮತ್ತು ಕೆನರಾ ಬ್ಯಾಂಕಿನಲ್ಲಿ ಸಾಲ ಮಾಡಿದ್ದ. ಸಾಲ ಬಾಧೆಯಿಂದ ತೀವ್ರವಾಗಿ ನೊಂದುಕೊಂಡಿದ್ದ ಎನ್ನಲಾಗುತ್ತಿದೆ.
ಮನೆಯಲ್ಲಿ ಯಾರು ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಜನವಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment