ಸಾಲ ಬಾಧೆ- ರೈತ ನೇಣಿಗೆ ಶರಣು

ಕೆ.ಆರ್.ಪೇಟೆ,ನ.8- ಸಾಲದ ಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹರಿಹರಪುರ ಗ್ರಾಮದಲ್ಲಿ ನಡೆದಿದೆ.
ಹರಿಹರಪುರ ಗ್ರಾಮದ ಯಾಲಕ್ಕೀಗೌಡ ಅವರ ಮಗ ಜವರೇಗೌಡ(55) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದು ಬಂದಿದೆ.
ಘಟನೆ ವಿವರ: ರೈತ ಜವರೇಗೌಡ ಹರಿಹರಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸೇರಿದಂತೆ ವಿವಿಧ ಬ್ಯಾಂಕುಗಳಲ್ಲಿ ಸುಮಾರು 2ಲಕ್ಷ ರೂ ಜೊತೆಗೆ ಕೈಸಾಲ ಎರಡು ಲಕ್ಷ ಸಾಲ ಮಾಡಿ ತಮ್ಮ ಒಚಿದೂವರೆ ಎಕರೆ ಜಮೀನಿನಲ್ಲಿ ಬಾಳೆ ತೆಂಗಿನ ಬೆಳೆ ಬೆಳೆದಿದ್ದರು. ಮಳೆ ಇಲ್ಲದೆ ಬೆಳೆ ಕೈಗೂಡದ ಕಾರಣ ಸಾಲ ತೀರಿಸುವ ಮಾರ್ಗ ಕಾರಣ ತಮ್ಮ ಜಮೀನಿನ ಬಳಿ ಇರುವ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ನಂಜಾಮಣಿ ಅವರು ಗ್ರಾಮಾಂತರೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಮೃತ ರೈತನ ಅಂತಿಮ ದರ್ಶನ ಪಡೆದ ಕುಟುಂಬಕ್ಕೆ ಮಾಜಿ ಶಾಸಕ ಬಿ.ಪ್ರಕಾಶ್ ಮತ್ತಿತರರು ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಆನಂದಗೌಡ ಅವರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Comment