ಸಿಎಂ ಉಪವಾಸ

ಬೆಂಗಳೂರು, ಏ. ೬- ಬಿಜೆಪಿ ಸಂಸ್ಥಾಪನಾ ದಿನಾಚರಣೆಯ ದಿನವಾದ ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಕೋವಿಡ್‌ನಿಂದ ಸಂಕಷ್ಟದಲ್ಲಿರುವವರ ನೆರವಿಗಾಗಿ ಒಂದೊತ್ತಿನ ಉಪವಾಸ ನಡೆಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿಯ 40ನೇ ವರ್ಷದ ಸಂಸ್ಥಾಪನೆ ದಿನವಾದ ಇಂದು ದೇಶದ ಎಲ್ಲೆಡೆ ಕಾರ್ಯಕರ್ತರು ಒಂದೊತ್ತಿನ ಭೋಜನ ತ್ಯಜಿಸಿ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ನಿರ್ಗತಿಕರು, ಬಡವರಿಗೆ ಆಹಾರ ಒದಗಿಸುವ ಕೆಲಸ ಮಾಡಬೇಕು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚಿಸಿದ್ದಾರೆ. ಅದರಂತೆ ತಾವು ಸಹ ಇಂದು ಒಂದೊತ್ತಿನ ಉಪವಾಸ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಎಲ್ಲ ಕಾರ್ಯಕರ್ತರು ಇಂದು ಒಂದೊತ್ತಿನ ಉಪವಾಸ ನಡೆಸುವಂತೆಯೂ ಅವರು ಕರೆ ನೀಡಿದ್ದಾರೆ.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪಕ್ಷದ 40ನೇ ವರ್ಷದ ಸಂಸ್ಥಾಪನೆ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗಿದೆ ಎಂದು ಅವರು ಹೇಳಿದರು.

Leave a Comment