ಸಿದ್ಧುಗೆ ಮತ್ತೊಮ್ಮೆ ಸಿಎಂಯಾಗುವ ಅವಕಾಶ ಒದಗಿ ಬರಲಿ

ಕೆ.ಆರ್.ಪೇಟೆ,ಆ.13: ರಾಜ್ಯದ ಅಹಿಂದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರ ಹುಟ್ಟು ಹಬ್ಬದ ಅಂಗವಾಗಿ ತಾಲೂಕು ಕಾಂಗ್ರೆಸ್ ಘಟಕದ ವತಿಯಿಂದ ಪಟ್ಟಣದ ದುಂಡಶೆಟ್ಟಿ, ಲಕ್ಷ್ಮಮ್ಮ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಲಾಯಿತು.
ಕ್ಷೇತ್ರದ ಮಾಜಿ ಶಾಸಕರಾದ ಡಾ. ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಕೆಯುಐಡಿಎಫ್‍ಸಿ ನಿಗಮದ ಮಾಜಿ ರಾಜ್ಯಾಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಕೋಡಿಮಾರನಹಳ್ಳಿ ಎಲ್.ದೇವರಾಜು, ಮನ್‍ಮುಲ್ ಮಾಜಿ ಅಧ್ಯಕ್ಷ ಎಂ.ಬಿ.ಹರೀಶ್, ಪುರಸಭಾ ಸದಸ್ಯರಾದ ಕೆ.ಸಿ.ಮಂಜುನಾಥ್, ಕೆ.ಆರ್.ರವೀಂದ್ರಬಾಬು, ಡಿ.ಪ್ರೇಮಕುಮಾರ್, ಹೆಚ್.ಎನ್.ಪ್ರವೀಣ್, ಕೆ.ಕೆ.ರಮೇಶ್, ಪುರಸಭೆಯ ಮಾಜಿ ಸದಸ್ಯ ಕೆ.ಪುರುಷೋತ್ತಮ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರೇಗೌಡ ಮತ್ತಿತರರ ನೇತೃತ್ವದಲ್ಲಿ ಹಣ್ಣು-ಹಂಪಲು ವಿತರಣೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಲಾಯಿತು.
ಹಣ್ಣು-ಹಂಪಲು ವಿತರಣೆ ಮಾಡಿದ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಅವರು ಐದು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನಡೆಸಿದ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಈ ರಾಜ್ಯದ ಮುಖ್ಯಮಂತ್ರಿಗಳಾಗುವ ಅವಕಾಶ ಒದಗಿ ಬರಲಿ, ಸದಾ ನೊಂದವರು, ಬಡವರು, ಧೀನ ದಲಿತರು, ಅಲ್ಪಸಂಖ್ಯಾತರ ಹಿತಕ್ಕಾಗಿ ಶ್ರಮಿಸುತ್ತಿರುವ ನಮ್ಮ ನೆಚ್ಚಿನ ನಾಯಕರಾದ ಸಿದ್ಧರಾಮಯ್ಯ ಅವರು ನೂರ್ಕಾಲ ಆರೋಗ್ಯವಂತರಾಗಿ ಬಾಳಲಿ ಎಂದು ಪ್ರಾರ್ಥಿಸಿದರು.

Leave a Comment