ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ಕೋರಿ ಸಿಎಂ ಭೇಟಿಯಾದ ನಿಯೋಗ

ಬೆಂಗಳೂರು, ಮೇ 29 – ಸಿನಿಮಾ ಚಿತ್ರೀಕರಣ, ಥಿಯೇಟರ್ ಆರಂಭ ಕೋರಿ ಸ್ಯಾಂಡಲ್ ವುಡ್ ಚಿತ್ರರಂಗದ ಗಣ್ಯರು ಶುಕ್ರವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಫಿಲ್ಮ್ ಚೆಂಬರ್ ಅಧ್ಯಕ್ಷ ಜೈರಾಜ್, ಸಾರಾ ಗೋವಿಂದು, ನಿರ್ಮಾಪಕ ಕೆ ಮಂಜು, ಕೆವಿ ಚಂದ್ರಶೇಖರ್ ಸೇರಿ ಹಲವರ ನಿಯೋಗ ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಚಲನಚಿತ್ರ ಚಿತ್ರೀಕರಣ ಪ್ರಾರಂಭಕ್ಕೆ ಅವಕಾಶ ಮಾಡಿಕೊಡುವುದರ ಜೊತೆಗೆ ಥಿಯೇಟರ್ ಕೂಡ ಆರಂಭಿಸುವುದಕ್ಕೆ ಅನುಮತಿ ನೀಡಬೇಕು. ಅಲ್ಲದೇ, ಚಿತ್ರರಂಗಕ್ಕೆ ಅನುದಾನ ನೀಡುವಂತೆ ಕೋರಿ ನಿಯೋಗ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದೆ.

ಈ ಕುರಿತು ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ತಾವು ಕೇಂದ್ರ ಸರ್ಕಾರದ ಜೊತೆಗೆ ಚರ್ಚಿಸಿ ಥಿಯೇಟರ್‌ ಆರಂಭಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿದರು. ಅಲ್ಲದೇ,
ಚಿತ್ರರಂಗಕ್ಕೆ ಅನುದಾನ ನೀಡುವ ಕುರಿತಾಗಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ

Share

Leave a Comment