ಸಿನಿಮಾ, ಧಾರವಾಹಿ ಶೂಟಿಂಗ್ ಆರಂಭ: ನಾಳೆ ತೀರ್ಮಾನ

 

ಬೆಂಗಳೂರು, ಮೇ 4- ಸಿನಿಮಾ ಮತ್ತು ಧಾರಾವಾಹಿಗಳ ಶೂಟಿಂಗ್ ಮಾಡಲು ಅನುಮತಿ ಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಸಿನಿಮಾ, ಧಾರಾವಾಹಿ ಶೂಟಿಂಗ್ ಯಾವಾಗಿನಿಂದ ಆರಂಭಿಸಬಹುದು ಎಂಬುದನ್ನು ನಾಳೆ ನಿರ್ಧರಿಸಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ಅವರು
ವರದಿಗಾರರಿಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ಚಿತ್ರರಂಗ ಹಾಗೂ ಟಿವಿ ದಾರಾವಾಹಿ ನಿರ್ಮಾಪಕರು, ನಿರ್ದೇಶಕರು ಸಾಮಾಜಿಕ ಅಂತರ ಪಾಲನೆ ಹಾಗೂ ಲಾಕ್‌ಡೌನ್ ನಿಯಮಗಳನ್ನು ಪಾಲಿಸುವ ಭರವಸೆ ನೀಡಿದ್ದಾರೆ. ಈ ಕುರಿತು ನನ್ನೊಂದಿಗೆ ಮಾತುಕತೆ ನಡೆಸಿದ್ದಾರೆ. ಎಂದರು.

ನಾಳೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಧಾರಾವಾಹಿಗಳ ಚಿತ್ರೀಕರಣ ಆರಂಭಿಸಲು ಅನುಮತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

Leave a Comment