ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ ಹಿನ್ನಲೆ : ಹೈಅಲರ್ಟ ಘೋಷಣೆ

ಬೆಂಗಳೂರು : ರಾಜ್ಯಧ್ಯಂತ ವರುಣನ ಅಬ್ಬರ ಮುಂದುವರೆದಿದೆ. ಇತ್ತ ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನಲೆಯಲ್ಲಿ ರಾಜ್ಯದ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಈ ಸಂಬಂಧ ಬಿಬಿಎಂಪಿ ಆಯುಕ್ತರು ಮತ್ತು ಎಲ್ಲಾ ವಲಯದ ಅಧಿಕಾರಿಗಳ ಜೊತೆಗೆ ಮೇಯರ್ ಗೌತಮ್ ಕುಮಾರ್ ಸಭೆ ಕರೆದಿದ್ದಾರೆ.

ರಾಜ್ಯದಲ್ಲಿ ಮಹಾ ಮಳೆಯ ಅವಾಂತರ ಮುಂದುವರೆದಿದೆ. ಇತ್ತ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೂ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಹೀಗಾಗಿ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಜೈನ್, ಬಿಬಿಎಂಪಿ ಆಯುಕ್ತರು ಸೇರಿದಂತೆ ಎಲ್ಲಾ ಪ್ರಾದೇಶಿಕ ಆಯುಕ್ತರ ಸಭೆ ಕರೆದಿದ್ದಾರೆ. ಇಂತಹ ಸಭೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚೆ ನಡೆಸುತ್ತಿದ್ದಾರೆ.

ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಅವರು, ತಗ್ಗು ಪ್ರದೇಶದಲ್ಲಿ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳನ್ನು ಕುರಿತು ಚರ್ಚೆ ನಡೆಸಿದ್ದಲ್ಲದೇ, ರಾಜಧಾನಿಯಲ್ಲಿ ಅಹಿತಕರ ಘಟನೆ ಏನಾದ್ರೂ ಸಂಭವಿಸಿದ್ರೇ, ಕೈಗೊಳ್ಳಬಹುದಾಗ ತಕ್ಷಣದ ಕ್ರಮಗಳೂ, ಅದಕ್ಕೆ ಬೇಕಾಗುವಂತ ಅಗತ್ಯ ತುರ್ತು ವಾಹನಗಳನ್ನು ಸಿದ್ದ ವಿರುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಿಲಿಕಾನ್ ಸಿಟಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಯಾವುದೇ ಅಧಿಕಾರಿಗಳಿಗೆ ರಜೆಗೆ ತೆರಳದಂತೆ ಖಡಕ್ ಆಗೇ ಸೂಚನೆ ನೀಡಲಾಗಿದೆ.

Leave a Comment