ಸಿ.ಎಂ.ಯಡಿಯೂರಪ್ಪ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ

ಧರ್ಮಸ್ಥಳ, ಅ.೧೩- ಬೆಳ್ತಂಗಡಿ ತಾಲೂಕಿನ ಪ್ರವಾಹಪೀಡಿತ ಕುಕ್ಕಾವು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಮುಖ್ಯ ಮಂತ್ರಿ ಯಡಿಯೂರಪ್ಪರವರನ್ನು ಹೆಗ್ಗಡೆಯವರ ಸಹೋದರ ಶ್ರೀ ಡಿ.ಹರ್ಷೇಂದ್ರ ಕುಮಾರ್ ರವರು ಸ್ವಾಗತಿಸಿದರು.
ಬಳಿಕ ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ರಾಜ್ಯದಲ್ಲಿ ಸುಖ,ಶಾಂತಿ,ನೆಮ್ಮದಿಗಾಗಿ,ಪ್ರಾರ್ಥಿಸಿದರು.

ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಆರ್.ಎಸ್.ಎಸ್ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಧರ್ಮಸ್ಥಳದ ಹರ್ಷೇಂದ್ರ ಕುಮಾರ್, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಶ್ರೀ ಸನ್ನಿದಿ ಅತಿಥಿ ಗೃಹದಲ್ಲಿ ಭೋಜನ ಸ್ವಿಕರಿಸಿ.ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನೆರೆ ಸಂತ್ರಸ್ತರಿಗೆ ಪರಿಹಾರ ನಿಡುವ ಬಗ್ಗೆ ಸಬೆ ನಡೆಸಿ ತಕ್ಷಣ ಎಲ್ಲರು ಕಾರ್ಯ ಪ್ರವರ್ತರಾಗ ಬೇಕೇಂದು ಆದೇಶಿಸಿದರು.

Leave a Comment