ಸುಗಮ ಸಂಗೀತ ಕಾರ್ಯಕ್ರಮ

ರಾಯಚೂರು.ಸೆ.08- ನಗರದ ಖಾಸಭಾವಿ ಹತ್ತಿರವಿರುವ ಅಂಬಾಭವಾನಿ ದೇವಸ್ಥಾನದಲ್ಲಿ ಮಲ್ಲಣ್ಣ ಶಿವರಾಯ ಗೌಡ ಹರವಾಳ ಇವರಿಂದ ಸುಗಮ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕರ್ನಾಟಕ ಛತ್ರಿಯ ಮರಾಠ ಸಂಘ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಸುಗಮ ಸಂಗೀತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ವೀರ ಹನುಮಾನ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ಗಿರಿಜಾ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಶಾಂತ ಕುಲಕರ್ಣಿ, ಕಾರ್ಯಕ್ರಮಕ್ಕೆ ಆಗಮಿಸಿ ಮೆರಗು ನೀಡಿದರು.
ಅಹ್ಮದ್ ಅನ್ಸಾರಿ ಹಾರ್ಮೋನಿಯಂ, ಗೋಪಾಲ ಗುಡಿಬಂಡಿ ತಬಲ ಹಾಗೂ ಜಯಪ್ಪ ಆಶಾಪೂರು ಕ್ಯಾಸಿಯೋ ಸಾಥ್ ನೀಡಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

Leave a Comment