ಸುದೀಪ್‌ಗೆ ೪೪ರ ಹುಟ್ಟುಹಬ್ಬದ ಸಂಭ್ರಮ

(ನಮ್ಮ ಪ್ರತಿನಿಧಿಯಿಂದ)
ಬೆಂಗಳೂರು,ಸೆ.೨-ಕನ್ನಡ ಚಿತ್ರರಂಗದಲ್ಲಿ ಕರುನಾಡ ಚಕ್ರವರ್ತಿ ಎಂದೇ ಗುರುತಿಸಿಕೊಂಡಿರುವ ನಟ ಕಿಚ್ಚ ಸುದೀಪ್ ಅವರಿಗೆ ಇಂದು ೪೪ನೇ ಹುಟ್ಟುಹಬ್ಬದ ಸಂಭ್ರಮ. ಜೆ.ಪಿ ನಗರದ ನಿವಾಸದಲ್ಲಿ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಸರಳವಾಗಿ ಹಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ವೇಳೇ ಸುರಿಯ ಮಳೆಯನ್ನೂ ಲೆಕ್ಕಿಸದೆ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುವ ಬದಲು ಅನಾಥ ಮಕ್ಕಳಿಗೆ ಸಹಾಯ ಮಾಡುವಂತೆ ತನ್ನ ಅಭಿಮಾನಿಗಳಿಗೆ ಸುದೀಪ್ ಮನವಿ ಮಾಡಿಕೊಂಡಿದ್ದರು. ಅದರಂತೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನೂ ಕೇಕ್ ಕತ್ತರಿಸಿ ಸರಳವಾಗಿ ಹುಟ್ಟುಹಬ್ಬ ಆಚರಿಸಿದರು. ರಾತ್ರಿಯಿಂದ ಸುರಿವ ಮಳೆಯನ್ನು ಲೆಕ್ಕಿಸದೆ ಅಭಿಮಾನಿಗಳು ಹುಟ್ಟುಹಬ್ಬಕ್ಕೆ ಶುಭಕೋರಿದರು.

ಪರಸ್ಪರ ಸಮ್ಮತಿಯ ಮೇರೆಗೆ ಪತ್ನಿ ಪ್ರಿಯಾಗೆ ವಿಚ್ಛೇಧನ ನೀಡಲು ಮುಂದಾಗಿದ್ದ ನಟ ಸುದೀಪ್ ಕೌಟಂಬಿಕ ನ್ಯಾಯಾಲಯದಲ್ಲಿ ಅರ್ಜಿಯನ್ನು ವಾಪಸ್ ಪಡೆದಿದ್ದರು. ಹೀಗಾಗಿ ಸುದೀಪ್ ಅಭಿಮಾನಿಗಳಿಗೆ ಹುಟ್ಟುಹಬ್ಬ ಡಬಲ್ ಸಂಭ್ರಮವಾಗಿದೆ.

ಹುಟ್ಟುಹುಬ್ಬಕ್ಕೂ ಮುನ್ನಾ ದಿನ ಸುದೀಪ್ ದಂಪತಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಈ ಮೂಲಕ ಮತ್ತೆ ಒಂದಾಗಿ ಬಾಳಲು ಮುಂದಾಗಿರುವುದು ಅಭಿಮಾನಿಗಳಲ್ಲಿ ಸಂತಸಕ್ಕೆ ಕಾರಣವಾಗಿದೆ.

ಹುಟ್ಟುಹಬ್ಬ ಆಚರಿಸಕೊಂಡ ನಟ ಸುದೀಪ್ ಅವರಿಗೆ ಚಿತ್ರರಂಗದ ಹಲವು ಗಣ್ಯರು ಶುಭಕೋರಿ ಚಿತ್ರರಂಗದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ’ವಿಲನ್’ ಚಿತ್ರದ ಟೀಸರ್ ಬಿಡುಗಡಗೆಯಾಗಿದೆ.

Leave a Comment