ಸುಧಾಕರ್ ಗೆ ರಾಹುಲ್ ಕೊಟ್ಟ ಭರವಸೆ ಹುಸಿಯಾಯ್ತು, ಸಚಿವ ಸ್ಥಾನ ಕೈತಪ್ಪಿತು!

ಬೆಂಗಳೂರು, ಜೂನ್ 14: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಜಾಣತನದ ನಡೆ ಇಡುವ ಮೂಲಕ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. ರಾಜಭವನದಲ್ಲಿಂದು ಇಬ್ಬರು ಪಕ್ಷೇತರರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಈ ಮೂಲಕ ಜೆಡಿಎಸ್ ಕೋಟಾ ತುಂಬಿಸಿದ್ದಾರೆ.

ಜೊತೆಗೆ ಕಾಂಗ್ರೆಸ್ ಕೋಟಾದಡಿ ಸಂಪುಟ ಸೇರ ಬಯಸಿದ್ದವರ ತಲೆನೋವಿಗೂ ತಮಗೂ ಸಂಬಂಧವಿಲ್ಲ ಎಂದು ಪರೋಕ್ಷವಾಗಿ ಸೂಚಿಸಿದ್ದಾರೆ. ಸಂಪುಟ ವಿಸ್ತರಣೆ ಬಳಿಕ ಮೊದಲ ಅಸಮಾಧಾನದ ಹೊಗೆ ಎದ್ದಿದೆ. ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಅವರು ತಮಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

‘ಎಐಸಿಸಿ ಅಧ್ಯಕ್ಷ ರಾಹುಲ್‍ ಗಾಂಧಿ ಮಾತಿಗೆ ಬೆಲೆ ಇದ್ದಿದ್ದರೆ ನನಗೆ ಸಚಿವ ಸ್ಥಾನ ಸಿಗಬೇಕಿತ್ತು’ ಎಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಡಾ. ಸುಧಾಕರ್ ಅಸಮಾಧಾನ ಹೊರಹಾಕಿದ್ದಾರೆ.

ನೂತನ ಸಚಿವರಾಗಿ ಎಚ್ ನಾಗೇಶ್, ಆರ್ ಶಂಕರ್ ಪ್ರಮಾಣ ವಚನ

ಪಕ್ಷದಲ್ಲಿ ರಾಹುಲ್ ಗಾಂಧಿ ಅವರ ಮಾತಿಗೆ ಬೆಲೆಯೇ ಇಲ್ಲ. ಒಂದು ವೇಳೆ ಅವರ ಮಾತಿಗೆ ಬೆಲೆ ಇದ್ದಿದ್ರೆ, ರಾಹುಲ್‍ ಗಾಂಧಿ ಭರವಸೆ ನೀಡಿದಾಗಲೇ ನನಗೆ ಸಚಿವ ಸ್ಥಾನ ಸಿಗುತ್ತಿತ್ತು ಎಂದು ಹೇಳಿದ್ದಾರೆ. ಇನ್ಮುಂದೆ ಸಚಿವ ಸ್ಥಾನಕ್ಕಾಗಿ ನಾನು ಯಾವ ಮುಖಂಡನನ್ನು ಭೇಟಿಯಾಗಲ್ಲ ಎಂದಿದ್ದಾರೆ.

ಸುಧಾಕರ್ ಗೆ ರಾಹುಲ್ ಕೊಟ್ಟ ಭರವಸೆ ಹುಸಿಯಾಯ್ತು
ಈಗ ಚುನಾವಣೆ ನಡೆದರೆ ಕಾಂಗ್ರೆಸ್ ಸ್ಥಿತಿ ಗತಿ
ಲೋಕಸಭೆ ಚುನಾವಣೆ ಫಲಿತಾಂಶ ನೋಡಿದ ಬಳಿಕ ಒಂದು ವೇಳೆ ಈ ಸಮಯದಲ್ಲಿ ಮಧ್ಯಂತರ ಚುನಾವಣೆ ನಡೆಸಿದರೆ ಕಾಂಗ್ರೆಸ್ ಸ್ಥಿತಿ ಏನಾಗಬಹುದು ಎಂಬ ಪ್ರಶ್ನೆಗೆ ಸುಧಾಕರ್ ಉತ್ತರಿಸಿ, ತಕ್ಷಣಕ್ಕೆ ಚುನಾವಣೆ ನಡೆದರೆ ಕಾಂಗೆಸ್ಸಿಗೆ ಗೆಲುವು ಅಸಾಧ್ಯ ಎಂದರು.

ಕೋಳಿವಾಡ ಅವರು ಮಧ್ಯಂತರ ಚುನಾವಣೆ ಬಗ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿ,
ಅದು ಅವರ ವೈಯಕ್ತಿಕ ವಿಚಾರಧಾರೆ ಇರಬಹುದು, ಪಕ್ಷವನ್ನು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರಲು ತಕ್ಷಣಕ್ಕೆ ಆಗುವುದಿಲ್ಲ ಎಂದಿದ್ದಾರೆ.

ಸುಧಾಕರ್ ಗೆ ರಾಹುಲ್ ಕೊಟ್ಟ ಭರವಸೆ ಹುಸಿಯಾಯ್ತು
ನಾನು ಅತೃಪ್ತ ಶಾಸಕರ ಪಟ್ಟಿಯಲ್ಲಿಲ್ಲ

ನಾನು ಅತೃಪ್ತ ಶಾಸಕರ ಪಟ್ಟಿಯಲ್ಲಿಲ್ಲ. ನನಗೆ ಯಾವುದೇ ಅಧಿಕಾರ ಕೊಡಿ ಎಂದು ಯಾರನ್ನು ಕೇಳಿಲ್ಲ. ನನಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮುಖ್ಯಸ್ಥನಾಗಲೂ ಸೂಚಿಸಲಾಗಿತ್ತು. ಆದರೆ, ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಆದೇಶ ಹೊರಡಿಸಲಿಲ್ಲ ಎಂದರು. ಹಿರಿಯ ಕಾಂಗ್ರೆಸ್ಸಿಗ ರಾಮಲಿಂಗಾ ರೆಡ್ಡಿ ಅವರಂತೆ ಸುಧಾಕರ್ ಕೂಡಾ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ, ಸಚಿವ ಸ್ಥಾನ ಸಿಗದೆ ಅತೃಪ್ತ ಶಾಸಕರ ಬಣ ಸೇರಿದ್ದಾರೆ ಎಂಬ ಸುದ್ದಿಯನ್ನು ಸುಧಾಕರ್ ಅಲ್ಲಗೆಳೆದಿದ್ದಾರೆ.

ಸುಧಾಕರ್ ಗೆ ರಾಹುಲ್ ಕೊಟ್ಟ ಭರವಸೆ ಹುಸಿಯಾಯ್ತು
ಪಕ್ಷೇತರರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ

ಕಾಂಗ್ರೆಸ್ ನಾಯಕರನ್ನು ಹೊರಗಿಟ್ಟು ಪಕ್ಷೇತರರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಪ್ರತಿಕ್ರಿಯಿಸಿ ಸಮ್ಮಿಶ್ರ ಸರ್ಕಾರದಲ್ಲಿ ಎರಡು ಪಕ್ಷಗಳ ಹಿತವನ್ನು ನೋಡಿಕೊಂಡು ಸಂಪುಟ ವಿಸ್ತರಣೆ ಮಾಡಬೇಕಾಗುತ್ತದೆ. ಸಂಪುಟಕ್ಕೆ ಯಾರನ್ನು ಸೇರಿಸಿಕೊಂಡಿದ್ದಾರೆ ಎಂಬುದರ ಬಗ್ಗೆ ನಾನು ಪ್ರತಿಕ್ರಿಯಿಸಲಾರೆ, ಮಾಲಿನ್ಯ ನಿಯಂತ್ರಣ ಮಂಡಳಿ ಮುಖ್ಯಸ್ಥ ಮತ್ತೆ ಒಲಿದು ಬಂದರೆ ಈ ಬಗ್ಗೆ ಪಕ್ಷದ ಹಿರಿಯ ಮುಖಂಡರೊಡನೆ ಮಾತನಾಡಿ, ನಿರ್ಧಾರ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಸುಧಾಕರ್ ಗೆ ರಾಹುಲ್ ಕೊಟ್ಟ ಭರವಸೆ ಹುಸಿಯಾಯ್ತು
ಎರಡನೇ ಬಾರಿಗೆ ಸಂಪುಟ ವಿಸ್ತರಣೆ

ರಾಜಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಿಆರ್ ವಾಲಾ ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇದ್ದರು. ಸಂಪುಟ ದರ್ಜೆ ಸಚಿವರಾಗಿ ಆರ್ ಶಂಕರ್ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ಆರ್ ಶಂಕರ್ ಅವರು ಕೆಪಿಜೆಪಿ ಪಕ್ಷದಲ್ಲಿದ್ದು ಇದೀಗ ಕಾಂಗ್ರೆಸ್‌ ಜೊತೆ ವಿಲೀನ ಮಾಡಿಕೊಂಡಿದ್ದಾರೆ. ಇದೆ ವೇಳೆ ಮುಳಬಾಗಿಲಿನ ಪಕ್ಷೇತರ ಶಾಸಕ ಎಚ್ ನಾಗೇಶ್ ಕೂಡಾ ಸಚಿವ ಸಂಪುಟ ಸೇರಿದ್ದಾರೆ.

Leave a Comment