ಸುಪ್ರೀಂ ಸೂಚನೆ ಅತೃಪ್ತರು ಪಾಲನೆ : ಖರ್ಗೆ

ಬೆಂಗಳೂರು, ಜು ೧೧- ಸುಪ್ರೀಂ ಕೋರ್ಟ್ ಆದೇಶದಂತೆ ಅತೃಪ್ತ ಶಾಸಕರೆಲ್ಲರೂ ಇಂದು ಸಂಜೆಯೊಳಗೆ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸುಪ್ರೀಂ ಕೋರ್ಟ್ ಅತೃಪ್ತ ಶಾಸಕರಿಗೆ ಕೂಡಲೇ ಬೆಂಗಳೂರಿಗೆ ತೆರಳಿ ಸ್ಪೀಕರ್ ಭೇಟಿ ಮಾಡುವಂತೆ ಆದೇಶ ನೀಡಿದೆ.
ಇಂದು ಸಂಜೆಯೊಳಗೆ ಎಲ್ಲ ಶಾಸಕರು ಸ್ಪೀಕರ್ ಭೇಟಿ ಮಾಡಿ ರಾಜೀನಾಮೆ ನೀಡಿರುವ ಬಗ್ಗೆ ವಿವರಣೆ ನೀಡಲಿದ್ದು, ಕಾನೂನಿನಡಿಯಲ್ಲಿ ಸ್ಪೀಕರ್ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಸ್ಪೀಕರ್ ರಮೇಶ್ ಕುಮಾರ್ ಅತೃಪ್ತ ಶಾಸಕರು ನೀಡಿರುವ ರಾಜೀನಾಮೆ ಕಾರಣವನ್ನು ತಿಳಿದುಕೊಂಡಿದ್ದಾರೆ. ಹಾಗಾಗಿ ಈ ಬಗ್ಗೆ ಹೆಚ್ಚಿಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

Leave a Comment