ಸುಭಾಶ್ಚಂದ್ರ ಬೋಸ್ ಜನ್ಮದಿನ: ಹಣ್ಣು-ಹಂಪಲು ವಿತರಣೆ

ರಾಯಚೂರು.ಜ.25- ಸುಭಾಶ್ಚಂದ್ರ ಬೋಸ್ ಅವರ ಜನ್ಮದಿನಾಚರಣೆ ಅಂಗವಾಗಿ ಹಿಂದೂಸ್ತಾನ್ ಯುವಸೇನೆ ವತಿಯಿಂದ ನಗರದ ನಿರಾಶ್ರಿತ ಪರಿಹಾರ ಕೇಂದ್ರದಲ್ಲಿ ನಿರಾಶ್ರಿತರಿಗೆ ದಿ. 24 ರಂದು ಬೆಳಗಿನ ಉಪಹಾರ ಮತ್ತು ಬಾಳೆಹಣ್ಣುಗಳನ್ನು ವಿತರಿಸಲಾಯಿತು.
ಸುಭಾಶ್ಚಂದ್ರ ಬೋಸ್ ಮತ್ತು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸಾಯಿ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಸಾಯಿ ಕಿರಣ್ ಆದೋನಿ, ಯುವ ಮುಖಂಡ ಓಂಕಾರ್ ಯಾದವ್ ಭಾವಹಿಸಿದ್ದರು.
ಕಾರ್ಯಕ್ರಮದಲ್ಲಿ ನಿರಾಶ್ರಿತರಿಗೆ ಬೆಳಗಿನ ಉಪಹಾರ ಮತ್ತು ಬಾಳೆಹಣ್ಣುಗಳನ್ನು ವಿತರಿಸಲಾಯಿತು. ಹಿಂದೂಸ್ತಾನ್ ಯುವಸೇನೆ ಪದಾಧಿಕಾರಿಗಳು ಭಾಗವಹಿಸಿದ್ದರು.

Leave a Comment