ಸುಳ್ಯಕ್ಕೂ ಕಾಲಿಟ್ಟ ಕೊರೊನ: ಆತಂಕದಲ್ಲಿ ಜನತೆ

ಮಂಗಳೂರು, ಎ.೧- ದ.ಕ. ಜಿಲ್ಲೆಯ ಸುಳ್ಯದಲ್ಲಿ ನಿನ್ನೆ ಒಂದು ಹೊಸ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು ತಾಲೂಕಿನ ಜನತೆಯ ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಅಧಿಕೃತವಾಗಿ ತಿಳಿಸಿದ್ದು, ದುಬೈನಿಂದ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ.
ಅಜ್ಜಾವರ ಗ್ರಾಮದ ನಿವಾಸಿಯಲ್ಲಿ ಸೋಂಕು ಪತ್ತೆಯಾಗಿದ್ದು ಈತ ಮಾರ್ಚ್ ೧೮ರಂದು ವಿದೇಶದಿಂದ ಬಂದಿದ್ದರು. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭದಲ್ಲಿ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆಯಲ್ಲೇ ಕ್ವಾರಂಟೆನ್ ಇರುವಂತೆ ಸೂಚಿಸಲಾಗಿತ್ತು. ಮಾರ್ಚ್ ೨೮ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದೆ. ಪರೀಕ್ಷಾ ವರದಿ ನಿನ್ನೆ ಲಭ್ಯವಾಗಿದ್ದು, ಪಾಸಿಟಿವ್ ಎಂಬುವುದಾಗಿ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Comment