ಸುಳ್ಳು ಸುದ್ದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯಗಳಿಗೆ ಕೇಂದ್ರದ ಸೂಚನೆ

ನವದೆಹಲಿ, ಏ 2 – ಸಮಾಜಕ್ಕೆ ಮಾರಕವಾಗಿರುವ ಸುಳ್ಳು ಸುದ್ದಿಗಳ ವಿರುದ್ಧ ಸೂಕ್ತ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ನೀಡಿದೆ.
ಈ ಸಂಬಂಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ. ವಾಸ್ತವ ಸಂಗತಿಗಳನ್ನು ಪರಿಶೀಲಿಸದ ಮತ್ತು ಅಸತ್ಯದಿಂದ ಕೂಡಿದ ಸುದ್ದಿಗಳ ಸಚಾತನ ಖಚಿತಪಡಿಸಿಕೊಳ್ಳಲು ವೆಬ್ ಪೋರ್ಟಲ್ ರಚಿಸುತ್ತಿರುವುದಾಗಿ ಸಚಿವಾಲಯ ತಿಳಿಸಿದೆ. ರಾಜ್ಯಗಳಲ್ಲೂ ಇದೇ ರೀತಿಯ ಪೋರ್ಟಲ್ ವ್ಯವಸ್ಥೆ ಕಲ್ಪಿಸಿ ಸುದ್ದಿಗಳ ವಿಶ್ವಾಸಾರ್ಹತೆ ಖಚಿತಪಡಿಸಿಕೊಳ್ಳುವಂತೆ ಸಲಹೆ ಮಾಡಿದೆ.
ವಲಸೆ ಕಾರ್ಮಿಕರು ಸಾಮೂಹಿಕವಾಗಿ ತಮ್ಮ ಊರುಗಳಿಗೆ ತೆರಳುತ್ತಿರುವ ವಿಚಾರದಲ್ಲಿ ಸುಳ್ಳು ಸುದ್ದಿ ಸೃಷ್ಟಿಸಿರುವುದನ್ನು ಸರ್ವೋನ್ನತ ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದ್ದು, ಇದರಿಂದ ಇಂತಹ ಜನ ಸಮೂಹ ಹೇಳಿಕೊಳ್ಳಲಾಗದ ಯಾತನೆ ಅನುಭವಿಸಿದೆ ಎಂದು ಹೇಳಿದೆ. ಈ ಕಾರ್ಮಿಕರಿಗೆ ಆಹಾರ, ವೈದ್ಯಕೀಯ ಸೌಲಭ್ಯ, ಆಶ್ರಯ ಒದಗಿಸುವಂತೆ ನ್ಯಾಯಾಲಯ ಸೂಚನೆ ನೀಡಿತ್ತು.

Leave a Comment