ಸೂರ್ಯಾಸ್ತದೊಳಗೆ ಗಣೇಶಮೂರ್ತಿ ವಿಸರ್ಜನೆಗೆ ಸೂಚನೆ

ತುಮಕೂರು, ಸೆ. ೧೧- ಗೌರಿ ಗಣೇಶ್ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿಸುವ ಗಣೇಶಮೂರ್ತಿಗಳನ್ನು ಸೂರ್ಯಾಸ್ತದೊಳಗೆ ವಿಸರ್ಜಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ದಿವ್ಯಾಗೋಪಿನಾಥ್ ಆದೇಶಿಸಿದ್ದಾರೆ.

ಗಣೇಶಮೂರ್ತಿಗಳನ್ನು ಪ್ರತಿಷ್ಠಾಪಿಸುವವರು ಪೆಂಡಾಲ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸುವಾಗ ಬೆಸ್ಕಾಂ ಅನುಮತಿ ಪಡೆಯಬೇಕು. ಸದಾಕಾಲ ಪೆಂಡಾಲ್‌ನಲ್ಲಿ ಸ್ವಯಂ ಸೇವಕರು ಇರಬೇಕು. ಮೂರ್ತಿ ವಿಸರ್ಜನೆಯ ಮೆರವಣಿಗೆ ವೇಳೆ ಸಾರ್ವಜನಿಕರಿಗೆ ಅನಗತ್ಯವಾಗಿ ತೊಂದರೆ ಕೊಡಬಾರದು. ಅಗತ್ಯ ಸಂದರ್ಭದಲ್ಲಿ ಪೊಲೀಸರನ್ನು ಸಂಪರ್ಕಿಸಬೇಕು.

ಪೊಲೀಸರು ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.
ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆ, ಅನುಕೂಲತೆ ಮತ್ತು ಹಿತದೃಷ್ಠಿಯಿಂದ ಹಬ್ಬವನ್ನು ಸುರಕ್ಷಿತವಾಗಿ ಆಚರಿಸಬೇಕು ಎಂದ ಹೇಳಿರುವ ಅವರು, ಜಿಲ್ಲೆಯ ಜನತೆಗೆ ಗೌರಿ-ಗಣೇಶ್ ಹಬ್ಬದ ಶುಭಾಶಯ ಕೋರಿದ್ದಾರೆ.

ಪಾಲಿಕೆ ಆವರಣದಲ್ಲಿ ಅನುಮತಿ
ನಗರ ವ್ಯಾಪ್ತಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಎಲ್ಲ ಅನುಮತಿಗಳು ಇಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ದೊರೆಯಲಿದೆ.

ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಪೊಲೀಸ್ ಇಲಾಖೆ, ಬೆಸ್ಕಾಂ ಇಲಾಖೆ ಅನುಮತಿ ನೀಡಲು ತಮ್ಮ ಪ್ರತಿನಿಧಿಯನ್ನು ನಿಯೋಜಿಸಲಾಗಿದ್ದು, ಗಣೇಶ ಮಂಡಳಿಗಳು ಅನುಮತಿ ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Comment