ಸೆಪ್ಟೆಂಬರ್‌ 26, 27 ರಂದು ಬ್ಯಾಂಕ್‌ ನೌಕರರ ಮುಷ್ಕರ

ನವದೆಹಲಿ:ಸೆ.12. 10 ಬ್ಯಾಂಕುಗಳ ವಿಲೀನಕ್ಕೆ ಕೇಂದ್ರ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ ಎರಡು ದಿನ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ.

ಸೆಪ್ಟೆಂಬರ್ 26, 27 ರಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್, ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಸಂಘಟನೆಯ ವತಿಯಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಸೆಪ್ಟೆಂಬರ್ 26, 27 ರಂದು ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಸರ್ಕಾರ ಸ್ಪಂದಿಸದಿದ್ದರೆ ನವೆಂಬರ್ ಎರಡನೇ ವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ಪ್ರಧಾನ ಕಾರ್ಯದರ್ಶಿ ದೀಪಲ್ ಕುಮಾರ್ ಶರ್ಮಾ ಮಾಹಿತಿ ನೀಡಿದ್ದಾರೆ. ಬ್ಯಾಂಕ್ ಗಳನ್ನು ವಿಲೀನ ಮಾಡುವುದನ್ನು ವಿರೋಧಿಸಿ ಮತ್ತು ಸಿಬ್ಬಂದಿಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Leave a Comment