ಸೆ. 13 ರಂದು ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು, ಸೆ. ೧೦- ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸೆ. 13 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಕೆ. ಮೋಹನ್ ದೇವ್ ಆಳ್ವ, ಡಾ. ಎಂ.ಕೆ. ಶೈಲಜಾ ಆಳ್ವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಿದೆ.

ಹಿರಿಯ ಸಂಗೀತ ವಿದ್ವಾಂಸ ಆರ್.ಕೆ. ಪದ್ಮನಾಭ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕಸಾಪ ಅಧ್ಯಕ್ಷ ಡಾ. ಮನುಬಳಿಗಾರ್ ಅಧ್ಯಕ್ಷತೆ ವಹಿಸುವರು. ಸುಪ್ರಸಿದ್ಧ ಹಿನ್ನೆಲೆ ಗಾಯಕಿ ಕಸ್ತೂರಿ ಶಂಕರ್‌ರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಹಿರಿಯ ಸಂಸ್ಕೃತಿ ಚಿಂತಕ ಕೆ. ಮೋಹನ್ ಆಳ್ವ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.

Leave a Comment