ಸೆ.16 ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ

ರಾಯಚೂರು.ಸೆ.07- ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದಿಂದ 2018 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಸೆ.16 ರಂದು ಸ್ಥಳೀಯ ಕೃಷಿ ವಿವಿ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆಂದು ಸಂಘದ ಅಧ್ಯಕ್ಷ ಬಿ.ವೆಂಕಟಸಿಂಗ್ ಹೇಳಿದರು.
ಅವರಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ, 2 ನೇ ವಾರ್ಷಿಕ ಸಮಾರಂಭ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಪುಟ್ಟರಂಗ ಶೆಟ್ಟಿ ಅವರು ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ, ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸಿದ್ದರಾಜು, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು ಸೇರಿದಂತೆ ಇನ್ನಿತರರು ಮುಖ್ಯಾತಿಥಿಗಳಾಗಿ ಭಾಗವಹಿಸಲಿದ್ದಾರೆಂದರು. ಇದೇ ಸಂದರ್ಭದಲ್ಲಿ 15 ಪತ್ರಕರ್ತರಿಗೆ ವಿಶೇಷ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಈ ಸಂದರ್ಭದಲ್ಲಿ ವೆಂಕಟೇಶ್ ಹೂಗಾರ ಉಪಸ್ಥಿತರಿದ್ದರು.

Leave a Comment