ಸೇನಾಪಡೆಗಳ ದಾಳಿ ಮೂವರು ಉಗ್ರರ ಹತ್ಯೆ

ಶ್ರೀನಗರ, ಸೆ. ೨- ಜಮ್ಮು-ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಸೇನಾಪಡೆಗಳು ಗುಂಡಿಕ್ಕಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಈ ಕಾರ್ಯಾಚರಣೆ ವೇಳೆ ಉಗ್ರಗಾಮಿಗಳು ನಡೆಸಿದ ಓರ್ವ ಸೇನಾಯೋಧ ಹುತಾತ್ಮನಾಗಿದ್ದಾನೆ ಎಂದು ರಕ್ಷಣಾ ಇಲಾಖೆಯ ವಕ್ತಾರ ರಾಜೇಶ್ ಕಾಲಿಯ ತಿಳಿಸಿದ್ದಾರೆ.

ಹತ ಉಗ್ರರಿಂದ ಭಾರಿ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ದಕ್ಷಿಣ ಕಾಶ್ಮೀರದ ಸೋಫಿಯಾನ್  ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾಪಡೆಗಳ ನಡುವೆ ಗುಂಡಿನಿ ಕಾಳಗ ನಡೆದಿದೆ.

ಲಡ್ಡಿ ಇಮಾಮ್‌ಸಾಬ್ ಗ್ರಾಮದಲ್ಲಿ ಭದ್ರತಾಪಡೆಗಳಿಗೆ ಉಗ್ರಗಾಮಿಗಳು ಅಡಗಿರುವ ಬಗ್ಗೆ ಮಾಹಿತಿ ತಿಳಿದು ಕಾರ್ಯಾಚರಣೆಗಿಳಿಯಿತು. ಈ ಸಂದರ್ಭದಲ್ಲಿ ಭದ್ರತಾಪಡೆಗಳತ್ತ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಈ ವೇಳೆ ಭದ್ರತಾಪಡೆಗಳು ನಡೆಸಿದ ಪ್ರತಿದಾಳಿಗೆ ಮೂವರು ಉಗ್ರಗಾಮಿಗಳು ಹತರಾಗಿದ್ದಾರೆ.

ಗುರುವಾರ ನಡೆದ ಗುಂಡಿನ ಕಾಳಗದಲ್ಲಿ ಬಂಡಿಪೋರ ಜಿಲ್ಲೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದವು.

Leave a Comment