ಸೇನಾ ಶಿಬಿರಗಳಿಗೆ ಹತ್ತಿರದಲ್ಲಿ ಮನೆ ಇರುವುದೇ ಸಮಸ್ಯೆಗೆ ಕಾರಣ

ಜಮ್ಮು, ಫೆ. ೧೩- ಸೇನಾ ಶಿಬಿರಗಳಗೆ ಹೊಂದಿಕೊಂಡಂತೆ ಮನೆಗಳನ್ನು ನಿರ್ಮಾಣ ಮಾಡಿರುವುದು ಸಮಸ್ಯೆ ಕಾರಣವಾಗಿದೆ ಎಂದು ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಜಮ್ಮುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೇನಾ ಶಿಬಿರಗಳ ಪಕ್ಕದಲ್ಲಿ ಅನುಮತಿ ಪಡೆದು ಮನೆಗಳನ್ನು ನಿರ್ಮಿಸಲಾಗಿದ್ದು, ಅವುಗಳನ್ನು ತೆರವುಗೊಳಿಸಲು ಕಷ್ಟದ ಕೆಲಸ ಎಂದು ತಿಳಿಸಿದರು.

ದೇಶದ ಸಂಪೂರ್ಣ ಚಿತ್ರಣದ ಬಗ್ಗೆ ಅಧ್ಯಯನ ನಡೆಸಿದ್ದು ಖಂಡಿತವಾಗಿಯೂ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಅವರು ವಿವರಿಸಿದರು.

ಸುಂಜ್ವಾನ್ ಸೇನಾ ಶಿಬಿರದ ಮೇಲೆ ನಡೆದಿರುವ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನ ಕೈವಾಡವಿದೆ. ಈ ದಾಳಿ ಸೂಕ್ತ ಸಮಯದಲ್ಲಿ ದಿಟ್ಟ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸೇನೆಗೆ ಎಲ್ಲಾ ರೀತಿಯ ಬೆಂಬಲ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ.

ಗುಂಡಿನ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರನ್ನು ನಿನ್ನೆ ಭೇಟಿ ಮಾಡಿ ಮಾಹಿತಿ ಪಡೆದುಕೊಂಡ ಸಚಿವರು, ಕುಟುಂಬ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದ್ದರು.

Leave a Comment