ಸ್ವಚ್ಚತೆ ಮಹತ್ವ ಸಾರಿದ ವಿದ್ಯಾರ್ಥಿಗಳು

ಲಕ್ಷ್ಮೇಶ್ವರ,ಆ6- ತಾಲೂಕಿನ ಯತ್ನಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಸ್ವಛ್ಘ ಭಾರತ ಅಭಿಯಾನದ ಜನ ಜಾಗೃತಿ ಮೂಡಿಸುವ ಕಾರ್ಯಕ್ರಮ ಶನಿವಾರ ಜರುಗಿತು.
ಶಾಲಾ ಮಕ್ಕಳು ಕೈಯಲ್ಲಿ ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ಘೋಷಣೆ ಕೂಗುತ್ತಾ ಶುದ್ಧ ಕುಡಿಯುವ ನೀರಿನ ಮಹತ್ವ, ಶೌಚಾಲಯದ ಮಹತ್ವ, ಮತ್ತು ಸ್ವಛ್ಘತೆಯ ಬಗ್ಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಜನ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಕೃಷ್ಣ ಲಮಾಣಿ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಗ್ರಾಮೀಣ ಜನರ ಆರೋಗ್ಯ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಏಮ್.ಸಿ. ಅಧ್ಯಕ್ಷರು, ಸದಸ್ಯರು ಮತ್ತು ಶಿಕ್ಷಕರು ಭಾಗವಹಿಸಿದ್ದರು.

Leave a Comment