ಸ್ವಚ್ಛತೆಗೆ ಆದ್ಯತೆ ನೀಡಿ-ಡೆಂಗ್ಯು ತಡೆಗಟ್ಟಿ

ರಾಯಚೂರು.ಮೇ ೧೬-ಮುಂಬರುವ ತಿಂಗಳನಿಂದ ಮಳೆಗಾಲ ಪ್ರಾರಂಭವಾಗುವುದರಿಂದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರದಲ್ಲಿ ನೀರು ನಿಲ್ಲಂದತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಆರೋಗ್ಯಧಿಕಾರಿ ಡಾ.ಎಂ.ಕೆ .ನಾಸೀರ್ ಹೇಳಿದರು.
ಅವರಿಂದು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಅಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಕಾರ್ಯಾಲಯ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಿಂದ ಆಯೋಜಿಸಿದ್ದ ವಿಶ್ವ ಡೆಂಗ್ಯು ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ಆಶಾ ಕಾರ್ಯಕರ್ತೆಯರು ಹಾಗೂ ನರ್ಸ್ ಸಿಬ್ಬಂದಿಗಳು ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ಜನರಿಗೆ ಮನವರಿಕೆ ಮಾಡಿ ಕೊಡುವ ಮೂಲಕ ಡೆಂಗ್ಯು ಹರಡುದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ.ಶಕೀರ್, ಡಾ.ಗಣೇಶ, ಡಾ.ಸುರೇಂದ್ರ ಬಾಬು, ಡಾ.ನಂದಿನಿ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Comment