ಸ್ವಾತಂತ್ರ್ಯೋತ್ಸವ ಸಂಚಾರ ಬದಲು

ಬೆಂಗಳೂರು,ಆ.೧೩-ಇದೇ ತಿಂಗಳ ೧೫ರಂದು ಬೆಳಿಗ್ಗೆ ನಡೆಯುವ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನಲೆಯಲ್ಲಿ ಕಬ್ಬನ್ ರಸ್ತೆಯ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಒಳಗೆ ಸುತ್ತ-ಮುತ್ತಲೂ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿ ಕೆಲ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ.

ಬಿಳಿ ಕಾರ್ ಪಾಸ್‌ಗಳಿರುವ ಗಣ್ಯರು, ಮಿಲಿಟರಿ ಅಧಿಕಾರಿಗಳು, ಕಬ್ಬನ್ ರಸ್ತೆಯಲ್ಲಿ ಸಂಚರಿಸಿ, ಪ್ರವೇಶ ದ್ವಾರ-೨ (ಎರಡು) ರ ಮುಖಾಂತರ ಒಳ ಪ್ರವೇಶಿಸಿ ಬಲ ತಿರುವ ಪಡೆದು ನಂತರ ಪೆರೇಡ್ ಮೈದಾನದ ಪಶ್ಚಿಮ ಭಾಗದಲ್ಲಿ ವಾಹನಗಳನ್ನು ನಿಲ್ಲಿಸಬೇಕು ಹಳದಿ ಕಾರ್ ಪಾಸ್‌ಗಳಿರುವ  ಆಹ್ವಾನಿತರು ಕಬ್ಬನ್ ರಸ್ತೆಯಿಂದ ಮಾಣಿಕ್‌ಷಾ ಪೆರೇಡ್ ಮೈದಾನಕ್ಕೆ ಉತ್ತರಾಭಿಮುಖವಾಗಿರುವ ಪ್ರವೇಶ ದ್ವಾರ-೧ರ ಮೂಲಕ ಬಂದು  ವಾಹನಗಳನ್ನು ಮೈದಾನದ ಉತ್ತರ-ಪಶ್ಚಿಮ ಭಾಗದಲ್ಲಿ ನಿಲ್ಲಿಸಬೇಕು

ಗಣ್ಯರು, ಸಚಿವರುಗಳು, ಸರ್ಕಾರದ ಕಾರ್ಯದರ್ಶಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು  ಮಾಧ್ಯಮದವರ ವಾಹನಗಳು, ಓ.ಬಿ. ವಾಹನಗಳು ಗೇಟ್ ನಂ. ೩ ಮೂಲಕ ಬಲ ತಿರುವು ಪಡೆದು ಮೈದಾನದ ಉತ್ತರ ದಿಕ್ಕಿನಲ್ಲಿ  ನಿಗದಿ ಪಡಿಸಿರುವ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಬೇಕು ಮಾಧ್ಯಮದವರ ವಾಹನಗಳು, ಓ.ಬಿ. ವಾಹನಗಳಿಗೆ ಮೈದಾನದ ಪೂರ್ವ ಭಾಗದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಪಿಂಕ್ ಪಾಸ್ ಮತ್ತು ಹಸಿರು ಪಾಸ್ ಹೊಂದಿರುವವರಿಗೆ ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ನಿಂದ ಕೆ.ಆರ್.ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ಕಾಮರಾಜ ರಸ್ತೆ ಆರ್ಮಿ ಶಾಲೆ ಮುಂಭಾಗ, ಮೈನ್ ಗಾರ್ಡ್ ಕ್ರಾಸ್ ರಸ್ತೆ, ಸಫೀನ ಪ್ಲಾಜಾ ಬಳಿ ನಿಲ್ಲಿಸಬೇಕು ಪಿಂಕ್ ಪಾಸ್ ಹೊಂದಿರುವವರು ಗೇಟ್ ನಂ. ೩ ರ ಮೂಲಕ ಹಾಗೂ ಹಸಿರು ಪಾಸ್ ಹೊಂದಿರುವವರು ಗೇಟ್ ನಂ. ೪ & ೫ ರ ಮೂಲಕ ನಡೆದು ಬರಬೇಕು.

ಕವಾಯತಿನಲ್ಲಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಸಾರ್ವಜನಿಕರುಗಳನ್ನು-ವಿಧ್ಯಾರ್ಥಿಗಳನ್ನು ಕರೆತರುವ ವಾಹನಗಳು ಪ್ರವೇಶ ದ್ವಾರ-೧ (ಒಂದು) ರ ಬಳಿ ನಿಲ್ಲಿಸಿ, ಮಕ್ಕಳನ್ನು ಇಳಿಸಿ ವಾಹನಗಳನ್ನು ಎಂ.ಜಿ.ರಸ್ತೆಯಲ್ಲಿ, ಅನಿಲ್ ಕುಂಬ್ಳೆ ವೃತ್ತದಿಂದ ಮೆಟ್ರೋ ನಿಲ್ದಾಣದ ವರೆಗೆ ರಸ್ತೆಯ ಉತ್ತರ ಭಾಗದಲ್ಲಿ ನಿಲ್ಲಿಸಬೇಕು ಪಿ.ಡಬ್ಬ್ಯೂ.ಡಿ, ಬಿ.ಬಿ.ಎಂ.ಪಿ ಮತ್ತಿತರ ಸರ್ಕಾರಿ ವಾಹನಗಳು ಪ್ರವೇಶ ದ್ವಾರ-೧ರ ಮೂಲಕ ಮೈದಾನದ ಒಳಗೆ ಬಂದು ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ)ನಿಲ್ಲಿಸಬೇಕು.

ದ್ವಿಚಕ್ರ/ನಾಲ್ಕು ಚಕ್ರದ ವಾಹನಗಳನ್ನು ಕಾಮರಾಜ ರಸ್ತೆಯ ಪೂರ್ವ ಭಾಗದಲ್ಲಿ ನಿಲ್ಲಿಸಿ ಕಾಮರಾಜ ರಸ್ತೆಯಲ್ಲಿರುವ ಪ್ರವೇಶ ದ್ವಾರ ೪ & ೫ ರ ಮೂಲಕ ಪಾಸ್ ಇಲ್ಲದವರು ವಾಹನಗಳನ್ನು ಕಾಮರಾಜ ರಸ್ತೆ ನಿಲುಗಡೆ ಪ್ರದೇಶದಲ್ಲಿ ನಿಲ್ಲಿಸಿ, ಕಾಮರಾಜ ರಸ್ತೆಯ ಪ್ರವೇಶ ದ್ವಾರ ೪ & ೫ ರ ಮೂಲಕ ನಡೆದು ಬರಬೇಕು.

ದ್ವಿಚಕ್ರ ವಾಹನ ಮತ್ತು ಕಾರುಗಳನ್ನು ಸಫೀನಾ ಪ್ಲಾಜಾ ಮುಂಭಾಗ, ಶಿವಾಜಿನಗರ ಬಿ.ಎಂ.ಟಿ.ಸಿ ಸಂಕೀರ್ಣದ ೨ನೇ ಮಹಡಿಯಲ್ಲಿ ಹಾಗೂ ಕಂಠೀರವ ಕ್ರೀಡಾಂಗಣದಲ್ಲಿ ನಿಲ್ಲಿಸಿ ಕಾಮರಾಜ ರಸ್ತೆಯಲ್ಲಿರುವ ಪ್ರವೇಶ ದ್ವಾರ ೪ & ೫ ರಮೂಕ ನಡೆದು ಬರಬೇಕು ಎಂ.ಜಿ ರಸ್ತೆ ಅನಿಲ್ ಕುಂಬ್ಳೇ ವೃತ್ತದಿಂದ ಮೆಟ್ರೋ ನಿಲ್ದಾಣದ ವರೆಗೆ ರಸ್ತೆಯ ಉತ್ತರ ಭಾಗದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಲಾ ಮಕ್ಕಳನ್ನು ಕರೆತರುವ ಬಿ.ಎಂ.ಟಿ.ಸಿ ಬಸ್ಸುಗಳ ನಿಲುಗಡೆ ಅವಕಾಶ ನೀಡಲಾಗಿದೆ.

ಸಂಚಾರ ನಿಷೇಧ
ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ಇನ್‌ಫೆಂಟ್ರಿ ರಸ್ತೆ – ಸಫೀನಾ ಪ್ಲಾಜಾ- ಎಡ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ- ಆಲೀಸ್ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ – ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.

ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್‌ನಿಂದ ಬಿ.ಆರ್.ವಿ. ಜಂಕ್ಷನ್ ಕಡೆಗೆ ಬರುವ ವಾಹನಗಳು, ಕಾಮರಾಜ ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್‌ನಲ್ಲಿ ಕಾಮರಾಜ ರಸ್ತೆಗೆ ಎಡತಿರುವು ಪಡೆದು, ಕಾವೇರಿ ಆರ್ಟ್ಸ್ & ಕ್ರಾಫ್ಟ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು, ಎಂ.ಜಿ.ರಸ್ತೆಯ ಮೂಲಕ ಬಂದು, ಅನಿಲ್‌ಕುಂಬ್ಳೆ ವೃತ್ತದಲ್ಲಿ ಮೂಲಕ ಮುಂದೆ ಸಾಗಬಹುದು.

ಅನಿಲ್‌ಕುಂಬ್ಳೆ ವೃತ್ತದಿಂದ ಕಬ್ಬನ್‌ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ರಸ್ತೆಯಲ್ಲಿ ಸಾಗಿ, ಬಲಕ್ಕೆ ತಿರುವು ಪಡೆದು-ಇನ್‌ಫೆಂಟ್ರಿ ರಸ್ತೆ- ಸಫೀನಾ ಪ್ಲಾಜಾ- ಎಡಕ್ಕೆ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ- ಆಲಿ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ – ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದು

ಕಾಫಿ ಬೋರ್ಡ್ ಕಡೆಯಿಂದ ಬಂದು ಬಿ.ಆರ್.ವಿ. ಜಂಕ್ಷನ್ ಕಡೆ ಹೋಗುವ ವಾಹನಗಳು ಟ್ರಾಫಿಕ್ ಹೆಡ್‌ಕ್ವಾರ್ಟರ್ ಬಳಿ ನೇರವಾಗಿ ಇನ್‌ಫೆಂಟ್ರಿ ರಸ್ತೆಯಲ್ಲಿ ಸಾಗಿ ಸಫೀನಾ ಪ್ಲಾಜಾ ಬಳಿ ಎಡಕ್ಕೆ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ- ಆಲಿ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ – ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.

ಎಂ.ಜಿ.ರಸ್ತೆಯಲ್ಲಿ ಕಾವೇರಿ ಆರ್ಟ್ಸ್ & ಕ್ರಾಫ್ಟ್ ವೃತ್ತದಿಂದ ಬಂದು, ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್‌ಗೆ ಹೋಗುವ ವಾಹನಗಳು ನೇರವಾಗಿ ಎಂ.ಜಿ.ರಸ್ತೆಯಲ್ಲಿ ಸಾಗಿ ಅನಿಲ್‌ಕುಂಬ್ಳೆ ವೃತ್ತದ ಬಳಿಗೆ ಬಂದು, ಬಲ ತಿರುವು ಪಡೆದು- ಬಿ.ಆರ್.ವಿ ಜಂಕ್ಷನ್‌ನಲ್ಲಿ ನೇರವಾಗಿ ಸಂಚರಿಸಿ, ಸೆಂಟ್ರಲ ಸ್ಟ್ರೀಟ್ ರಸ್ತೆಯಲ್ಲಿ ಮುಂದೆ ಸಾಗಬಹುದಾಗಿದೆ.

ಪೆರೇಡ್‌ಗೆ ಬರುವ ಎಲ್ಲಾ ಆಹ್ವಾನಿತರು ಹಾಗೂ ಸಾರ್ವಜನಿರಕರುಗಳು ಮೊಬೈಲ್,ಹೆಲ್ಮೆಟ್, ಕ್ಯಾಮೆರಾ, ರೇಡಿಯೋ, ಕೊಡೆ ತರುವುದು ನಿಷೇಧವಿದೆ. ಬೆಳಗ್ಗೆ ೮-೩೦ ಕ್ಕಿಂತ ಮುಂಚಿತವಾಗಿ ಬಂದು ಆಸೀನರಾಗುವಂತೆ ಸಂಚಾರ ಪೊಲೀಸರು ಕೋರಿದ್ದಾರೆ.

Leave a Comment