ಸ್ವಾತಂತ್ರ್ಯ ಹೋರಾಟಗಾರ ಸುಶೀಲ್ ರಥನ್ ನಿಧನ

ಶಿಮ್ಲಾ, ಜೂನ್ 25- ಸ್ವಾತಂತ್ರ್ಯ ಹೋರಾಟಗಾರ ಸುಶೀಲ್ ರಥನ್ ಮಂಗಳವಾರ ಚಂಡೀಗಢದ ಕಾಂಗ್ರ ಜಿಲ್ಲೆಯ ತಮ್ಮ ಸ್ವಗ್ರಾಮ ಜ್ವಾಲಾಮುಖಿಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
95 ವರ್ಷದ ಸುಶೀಲ್, ಕಳೆದ ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 1990ರಲ್ಲಿ ಜ್ವಾಲಾಮುಖಿ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಇವರು ಪಕ್ಷೇತರ ಅಭ್ಯರ್ಥಿ ಈಶ್ವರ್ ದಾಸ್ ವಿರುದ್ಧ 9 ಮತಗಳಿಂದ ಪರಾಭವಗೊಂಡಿದ್ದರು.
ನಂತರ ಅವರು ಸ್ವಾತಂತ್ರ್ಯ ಹೋರಾಟಗಾರರ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 2009ರಲ್ಲಿ ಇವರ ಪುತ್ರ ಕಾಂಗ್ರೆಸ್ ಪಕ್ಷದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಕಂಡಿದ್ದರು.
ಸುಶೀಲ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್, ಅವರ ಪತ್ನಿ ಪ್ರತಿಭಾ ಸಿಂಗ್ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಮುಖೇಶ್ ಅಗ್ನಿಹೋತ್ರಿ ಶೋಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆಮಾಡಿರುವ ಅವರು, ಮೃತರ ಕುಟುಂಬ ಸದಸ್ಯರ ಕುರಿತು ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Comment