ಹಂಪಿ ಕನ್ನಡ ವಿವಿ ಕುಲಪತಿಯಿಂದ ಸಿಎಂಗೆ ದೇಣಿಗೆ ಹಸ್ತಾಂತರ

ಹೊಸಪೇಟೆ,ಸೆ.5- ಕೊಡಗು ನೆರೆ ಸಂತ್ರಸ್ತರಿಗಾಗಿ ಸಾರ್ವಜನಿಕರು ಹಾಗೂ ಸಿಬ್ಬಂದಿಯಿಂದ ಸಂಗ್ರಹಿಸಿದ ದೇಣಿಗೆಯನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಮಲ್ಲಿಕಾ ಎಸ್. ಘಂಟಿ ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ನೀಡಿದರು.

ಹಂಪಿ ಕನ್ನಡ ವಿಶ್ವವಿದ್ಯಾಲಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಒಂದು ದಿನದ ವೇತನ 4,99,799 ರೂಗಳು ಹಾಗೂ ಸಾರ್ವಜನಿಕರಿಂದ ಸಂಗ್ರಹಿಸಿದ 1,71,418 ರೂಗಳ ಮೊತ್ತದ ಡಿ.ಡಿ.ಯನ್ನು ಸಿ.ಎಂ.ಗೆ ಸಲ್ಲಿಸಿದರು. ಸಾಹಿತಿ ಬಿ.ಟಿ. ಲಲಿತಾ ನಾಯಕ, ಕನ್ನಡ ಸಾಹಿತ್ಯ ಪರಿಷತ್ತಿನ ರಾಜಶೇಖರ ಹತಗುಂದಿ ಇದ್ದರು.

Leave a Comment