ಹಣದ ಬೇಡಿಕೆ ಆರೋಪ ಸತ್ಯಕ್ಕೆ ದೂರ

ರಾಯಚೂರು.ಜ.21- ನಗರ ಸೇರಿದಂತೆ ತಾಲೂಕಿನಾದ್ಯಂತ ನಡೆಯುತ್ತಿರುವ ಕುಡಿವ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿ ಸೂಕ್ತವಾಗಿ ನಿರ್ವಹಿಸುತ್ತಿಲ್ಲ ಹಾಗೂ ಹಣದ ಬೇಡಿಕೆ ಆರೋಪ ಸತ್ಯಕ್ಕೆ ದೂರವಾಗಿದೆಂದು ಡಾ.ಬಿ.ಆರ್.ಅಂಬೇಡ್ಕರ್ ಜನಸೇವಾ ಯುವಕರ ಸಂಘ ಜಿಲ್ಲಾಧ್ಯಕ್ಷ ಪರಶುರಾಮ ಅವರು ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ನಗರ ಸೇರಿದಂತೆ ತಾಲೂಕಿನಲ್ಲಿ ನೀರಿನ ಕಾಮಗಾರಿ ಕೈಗೊಂಡಿರುವ ಕಂಪನಿಯು ಗುತ್ತಿಗೆ ಪಟ್ಟಿಯಂತೆ ಕಾಮಗಾರಿ ನಿರ್ವಹಿಸುತ್ತಿಲ್ಲ. ಇಲ್ಲಿ ಯಾವುದೇ ಒಬ್ಬ ವ್ಯಕ್ತಿಯನ್ನು ಕೇಂದ್ರೀಕೃತವಾಗಿ ನಾವು ರೂಪಿಸುತ್ತಿಲ್ಲ. ಕಾಮಗಾರಿಗಳ ಗುಣಮಟ್ಟ ಕಾಪಾಡುವ ಉದ್ದೇಶದಿಂದ ಹೋರಾಟ ಮಾಡಲಾಗುತ್ತಿದೆ.
ನಮ್ಮ ಸಂಘಟನೆಯಿಂದ ಯಾವುದೇ ರೀತಿಯ ಹಣದ ಬೇಡಿಕೆ ಇಟ್ಟಿಲ್ಲವೆಂದು ತಿಳಿಸಿದರು. ನನ್ನ ವಿರುದ್ಧ ಆರೋಪ ಮಾಡಿರುವ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಜಿಲ್ಲಾಧ್ಯಕ್ಷ ಕೆ.ಶಿವಕುಮಾರ ಹೇಳಿಕೆಯು ಸತ್ಯಕ್ಕೆ ದೂರವಾಗಿದೆ. ಜೆಇ ಸುಖಮುನಿ ಅವರು ಅಂದಾಜು ಪಟ್ಟಿಯಂತೆ ಕಾಮಗಾರಿಗಳನ್ನು ನಿರ್ವಹಿಸದೆ.ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ರಘು ನಾಯಕ ಎಂಬುವವರು ನನಗೆ ಜೀವ ಬೇದರಿಕೆ ಹಾಕಿದ್ದಾರೆಂದು ದೂರಿ ಜಿಲ್ಲಾ ಪೊಲೀಸ್ ಇಲಾಖೆಯು ಸೂಕ್ತವಾದ ರಕ್ಷಣೆ ಒದಗಿಸಬೇಕೆಂದರು. ಮುಂಬರುವ ದಿನಗಳಲ್ಲಿ ಲೋಕಾಯುಕ್ತ ಇಲಾಖೆಯ ದೂರು ಸಲ್ಲಿಸಲಾಗುತ್ತದೆಂದರು.
ಈ ಸಂದರ್ಭದಲ್ಲಿ ಭೀಮೇಶ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Comment