ಹನೂರಿನಲ್ಲಿ ಉತ್ತಮ ಪ್ರತಿಕ್ರಿಯೆ

ಹನೂರು, ಸೆ.10- ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದವರೆ ನೀಡಿದ ಭಾರತ್ ಬಂದ್‍ಗೆ ಬೆಂಬಲವಾಗಿ ಹನೂರು ಪಟ್ಟಣದಲ್ಲಿ ಕಾಂಗ್ರೆಸ್ ಶಾಸಕ ಆರ್.ನರೇಂದ್ರ ನೇತೃತ್ವದಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಕಾಂಗ್ರೇಸ್ ಕಛೇರಿಯಿಂದ ಹೊರಟ ಪ್ರತಿಭಟನಕಾರರು ಅಂಬೇಡ್ಕರ್ ವೃತ್ತದ ಮೂಲಕ ಸಾಗಿ ಖಾಸಗಿ ಬಸ್ ನಿಲ್ದಾಣದ ಬಳಿ ಮಾನವ ಸರಪಳಿ ರಚಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪಟ್ಟಣದಲ್ಲಿ ಸಂಪೂರ್ಣ ಬಂದ್: ಕಾಂಗ್ರೇಸ್ ಪಕ್ಷಕರೆ ನೀಡಿದ್ದ ಭಾರತ್ ಬಂದ್‍ಗೆ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಲ್ಪಟ್ಟಿದ್ದವು. ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗುವ ಮೂಲಕ ಜನಜೀವನ ಅಸ್ಥವ್ಯಸ್ಥಗೊಂಡಿತು.
ಪಟ್ಟಣದಲ್ಲಿ ಬೆಳಿಗ್ಗೆ ಕೆಲವು ಅಂಗಡಿ ಮುಂಗಟ್ಟುಗಳು ತೆರೆದಿದ್ದ ಹಿನ್ನಲೆಯಲ್ಲಿ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದದ್ದು ಕಂಡು ಬಂದಿತು.

Leave a Comment