ಹರ್ಯಾಣ ಚುನಾವಣೆ; ಟೈಮ್ಸ್‌ ನೌ ಸಮೀಕ್ಷೆಯಲ್ಲಿ ಯಾರಿಗೆ ಜಯ

ಚಂಡೀಗಢ್, ಅಕ್ಟೋಬರ್ 21 : ಹರ್ಯಾಣ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. 90 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ.

ಸೋಮವಾರ 90 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಿತು. ಶೇ 61.92ರಷ್ಟು ಮತದಾನ ನಡೆದಿದೆ. ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿವೆ. Times Now-VMR ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ಹೀಗಿದೆ.
ಹರ್ಯಾಣ ವಿಧಾನಸಭೆಗೆ ಬಿಜೆಪಿಯಿಂದ ಟಿಕ್ ಟಾಕ್ ಸ್ಟಾರ್ ಸ್ಪರ್ಧೆ
ಹರ್ಯಾಣದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಪುನಃ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆಯೇ? ಎಂದು ಕಾದು ನೋಡಬೇಕಿದೆ. ಚುನಾವಣಾ ಫಲಿತಾಂಶ ಅಕ್ಟೋಬರ್ 24ರಂದು ಪ್ರಕಟವಾಗಲಿದೆ.
ಹರ್ಯಾಣ ಚುನಾವಣೆಗೂ ಮುನ್ನವೇ ಬಿಜೆಪಿಗೆ ಗೆಲುವಿನ ಮುನ್ಸೂಚನೆ
ಹರ್ಯಾಣದಲ್ಲಿ ಬಿಜೆಪಿ 71, ಕಾಂಗ್ರೆಸ್ 11 ಮತ್ತು ಇತರ ಪಕ್ಷಗಳು 8 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ.

Leave a Comment