ಹಳ್ಳಿಖೇಡ (ಬಿ) ಪುರಸಭೆ ಕಾಂಗ್ರೆಸ್ ಮಡಿಲಿಗೆ

(ಸಂಜೆವಾಣಿ ವಾರ್ತೆ)

ಹುಮನಾಬಾದ,ಸೆ.3- ಹುಮನಾಬಾದ ತಾಲ್ಲೂಕಿನ ಹಳ್ಳಿಖೇಡ (ಬಿ) ಪುರಸಭೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಪುರಸಭೆಯ ಒಟ್ಟು 23 ಸ್ಥಾನಗಳ ಪೈಕಿ 14 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದರ ಮೂಲಕ ಅಧಿಕಾರದ ಗದ್ದುಗೆ ತನ್ನದಾಗಿಸಿಕೊಂಡಿದೆ. ಬಿಜೆಪಿ ಕೇವಲ 5 ಸ್ಥಾನಗಳಲ್ಲಿ ತೃಪ್ತಿ ಪಟ್ಟುಕೊಂಡರೆ, ಜೆಡಿಎಸ್ 3 ಮತ್ತು ಪಕ್ಷೇತರರು 1 ಸ್ಥಾನದಲ್ಲಿ ಗೆಲವು ಸಾಧಿಸಿದ್ದಾರೆ.

ರಾಜ್ಯದ ಅತೀ ದೊಡ್ಡ ಗ್ರಾಮ ಪಂಚಾಯತಿಗಳನ್ನು ಸರ್ಕಾರ ಪುರಸಭೆಗಳನ್ನಾಗಿ ಪರಿವರ್ತಿಸಿತ್ತು. ಜಿಲ್ಲೆಯ ಅತಿ ದೊಡ್ಡ ಗ್ರಾಮ ಪಂಚಾಯತಿಗಳಲ್ಲಿ ಒಂದಾದ ಹಳ್ಳಿಖೇಡ (ಬಿ) ಸಹ ಪುರಸಭೆಯಾಗಿತ್ತು. ಈ ಪುರಸಭೆಗೆ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದರ ಮೂಲಕ ಅಧಿಕಾರದ ಗದ್ದುಗೆಯನ್ನು ತನ್ನದಾಗಿಸಿಕೊಂಡಿದೆ.

Leave a Comment